Home ಟಾಪ್ ಸುದ್ದಿಗಳು SSLC ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ

SSLC ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ

ಸಾಂದರ್ಭಿಕ ಚಿತ್ರ

ಬೆಂಗಳೂರು: 2022–23ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಗಳ ಅಂತಿಮ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಬುಧವಾರ ಬಿಡುಗಡೆ ಮಾಡಿದೆ. ಮಾರ್ಚ್ 31ರಿಂದ ಏಪ್ರಿಲ್ 15ರವರೆಗೆ ಪರೀಕ್ಷೆಗಳು ನಡೆಯಲಿವೆ.

ಮಾರ್ಚ್ 31ರಂದು ಪ್ರಥಮ ಭಾಷೆಗಳಾದ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಸಂಸ್ಕೃತ (100 ಅಂಕಗಳು), ಏ.3ರಂದು ಗಣಿತ, ವಿಭಿನ್ನ ಸಾಮರ್ಥ್ಯದ ಅಭ್ಯರ್ಥಿಗಳಿಗೆ ಸಮಾಜಶಾಸ್ತ್ರ (80 ಅಂಕಗಳು), 6ರಂದು ದ್ವಿತೀಯ ಭಾಷೆ ಇಂಗ್ಲಿಷ್, ಕನ್ನಡ (80 ಅಂಕಗಳು), 8ರಂದು ಎಂಜಿನಿಯರಿಂಗ್, ಅರ್ಥ ಶಾಸ್ತ್ರ ಸೇರಿದಂತೆ ಇತರೆ ವಿಷಯಗಳು (ಜೆಟಿಎಸ್ ಶಾಲೆಯ ವಿದ್ಯಾರ್ಥಿಗಳಿಗೆ), 10ರಂದು ವಿಜ್ಞಾನ, ರಾಜ್ಯಶಾಸ್ತ್ರ, ಹಿಂದೂಸ್ತಾನಿ, ಕರ್ನಾಟಕ ಸಂಗೀತ (80 ಅಂಕಗಳು) 12ರಂದು ತೃತೀಯ ಭಾಷೆಗಳಾದ ಹಿಂದಿ, ಕನ್ನಡ, ಇಂಗ್ಲಿಷ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು (80 ಅಂಕಗಳು), ಮಾಹಿತಿ ತಂತ್ರಜ್ಞಾನ, ರಿಟೇಲ್, ಆಟೊಮೊಬೈಲ್, ಹೆಲ್ತ್ ಕೇರ್, ಬ್ಯೂಟಿಷಿಯನ್ (60 ಅಂಕ ಗಳು), 15ರಂದು ಸಮಾಜ ವಿಜ್ಞಾನ (80 ಅಂಕಗಳು) ಪರೀಕ್ಷೆಗಳು ನಡೆಯ ಲಿವೆ.

Join Whatsapp
Exit mobile version