SSLC ಪರೀಕ್ಷೆ: ‘ ಕಳೆದ ವರ್ಷದಂತೆ ಈ ಬಾರಿ ಕೊರೊನಾ ಪಾಸ್ ಇಲ್ಲ’ ; ಸಚಿವ ನಾಗೇಶ್

Prasthutha: January 22, 2022

ಬೆಂಗಳೂರು: ಕಳೆದ ವರ್ಷ ಕೋವಿಡ್ ಸೋಂಕು ತೀವ್ರವಾಗಿ ಹರಡಿದ್ದರಿಂದ ವಿದ್ಯಾರ್ಥಿಗಳು ಪರೀಕ್ಷೆಯಿಲ್ಲದೆ ಉತ್ತೀರ್ಣರಾಗಿದ್ದರು ಆದರೆ ಈ ವರ್ಷ ಆ ವಿನಾಯಿತಿ ಇರುವುದಿಲ್ಲ, ಎಲ್ಲಾ ಎಸ್ಎಸ್ಎಲ್’ಸಿ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುತ್ತಾರೆಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.

ಈ ಬಾರಿಯ ಎಸ್ಎಸ್ಎಲ್’ಸಿ ಪರೀಕ್ಷೆಯ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯದ ಬಹುತೇಕ ಎಲ್ಲಾ ಶಾಲೆಗಳು ಶೇಕಡಾ 70 ರಷ್ಟು ಪಠ್ಯಕ್ರಮಗಳನ್ನು ಪೂರ್ಣಗೊಳಿಸಿವೆ, ಇನ್ನು ವಿದ್ಯಾರ್ಥಿಗಳಿಗೆ ಸಹಾಯವಾಗಲು ಶೇಕಡಾ 30 ರಷ್ಟು ಪಠ್ಯಕ್ರಮ ಕಡಿಮೆ ಮಾಡಲಾಗಿದೆ. 2020-21 ಶೈಕ್ಷಣಿಕ ವರ್ಷದಲ್ಲಿ ವಿದ್ಯಾರ್ಥಿಗಳು ಮತ್ತು ಶಾಲೆಗಳು ಕೋವಿಡ್-ಸಂಬಂಧಿತ ಹಲವಾರು ಸಮಸ್ಯೆಗಳನ್ನು ಎದುರಿಸಿದ್ದಾರೆ. ಕಳೆದ ಬಾರಿಯಂತೆ ಈ ಬಾರಿಯು ವಿದ್ಯಾರ್ಥಿಗಳನ್ನು ಪಾಸ್ ಮಾಡಿದರೆ, ವಿದ್ಯಾರ್ಥಿಗಳು ಓದುವುದನ್ನೇ ಮರೆತು ಬಿಡುವುದಲ್ಲದೆ, ಅವರ ಭವಿಷ್ಯಕ್ಕೆ ತೊಂದರೆಯಾಗುತ್ತದೆ ಎಂದರು.

ಇನ್ನು ಫೆಬ್ರವರಿ ಕೊನೆಯ ವಾರ ಅಥವಾ ಮಾರ್ಚ್ ಮೊದಲ ವಾರದಲ್ಲಿ ಕೊರೊನಾದ ತೀವ್ರತೆ ಕಡಿಮೆಯಾಗಲಿದೆ ಎಂದು ತಜ್ಙರು ಮಾಹಿತಿ ನೀಡಿದ್ದು, ಆ ನಿಟ್ಟಿನಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಮಾರ್ಚ್‌ನಿಂದ ಏಪ್ರಿಲ್ ಕೊನೆಯ ವಾರದ ವರೆಗು ನಡೆಸಲಾಗುವುದು ಎಂದಿದ್ದಾರೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!