ಮೇ 19ರಂದು SSLC ಪರೀಕ್ಷೆ ಫಲಿತಾಂಶ ಪ್ರಕಟ

Prasthutha|

ಮಡಿಕೇರಿ: ಮೇ 19ರಂದು ಎಸ್‌ಎಸ್ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ‌ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ. ನಾಗೇಶ್ ಅವರು ಹೇಳಿದ್ದಾರೆ.

- Advertisement -

  ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಮಾರ್ಚ್‌ 28 ರಿಂದ ಏಪ್ರಿಲ್‌ 11 ರವರಗೆ 2022 ನೇ ಸಾಲಿನ ಎಸ್‌ ಎಸ್‌ ಎಲ್ಸಿ ವಾರ್ಷಿಕ ಪರೀಕ್ಷೆಯನ್ನು ನಡೆಸಿತ್ತು. 

ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶವನ್ನು ಮೇ 15 ರಂದು ಪ್ರಕಟಿಸಲು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಎಲ್ಲಾ ತಯಾರಿ ನಡೆಸಿತ್ತು. ಸಾಲು ಸಾಲು ರಜೆ ಹಿನ್ನೆಲೆಯಲ್ಲಿ ವಿಳಂಬವಾಗಿತ್ತು. ಇದೀಗ ಫಲಿತಾಂಶಕ್ಕೆ ಮುಹೂರ್ತ ನಿಗದಿಯಾಗಿದೆ.

- Advertisement -

ಸುಮಾರು 234 ಕೇಂದ್ರಗಳಲ್ಲಿ ಮೌಲ್ಯಮಾಪನ ಪ್ರಕ್ರಿಯೆ ನಡೆದಿದ್ದು, ಸುಮಾರು 63,796 ಶಿಕ್ಷಕರು ಮೌಲ್ಯಮಾಪನ ಪ್ರಕ್ರಿಯೆಯಲ್ಲಿ ಭಾಗಿಯಾಗಿದ್ದರು.



Join Whatsapp