‘SSLC’ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ | ಇಲ್ಲಿದೆ ವೇಳಾಪಟ್ಟಿ

Prasthutha|

- Advertisement -

ಜೂನ್ 21ರಿಂದ ಜುಲೈ 5ರವರೆಗೆ ಎಸ್ ಎಸ್ ಎಲ್ ಸಿ ಪರೀಕ್ಷೆಗಳು ನಡೆಯಲಿವೆ ಎಂದು ಕರ್ನಾಟಕ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ.

ಧಾರವಾಡದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪರೀಕ್ಷೆ ನಡೆಸಲು ಸರ್ಕಾರ ತಾತ್ಕಾಲಿಕ ದಿನಾಂಕ ಪ್ರಕಟಿಸಿ, ಸಾರ್ವಜನಿಕರಿಂದ ಆಕ್ಷೇಪಣೆಗಳನ್ನು ಆಹ್ವಾನಿಸಿತ್ತು. ಆಕ್ಷೇಪಣೆ ಗಳನ್ನು ಸಲ್ಲಿಸಲು ಮತ್ತು ಸಲಹೆಗಳನ್ನು ನೀಡಲು ಒಂದು ತಿಂಗಳ ಕಾಲಾವಕಾಶ ಅಂದ್ರೆ ಫೆಬ್ರವರಿ 26ಕ್ಕೆ ನೀಡಿತ್ತು, ಅದರಂತೆ ಎಲ್ಲವನ್ನೂ ಪರಿಶೀಲನೆ ಮಾಡಿ ಇಲಾಖೆಯು ಜೂನ್ 21ರಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸಲು ನಿರ್ಧರಿಸಿದೆ ಎಂದು ಅವರು ಹೇಳಿದ್ದಾರೆ.

- Advertisement -

ವೇಳಾಪಟ್ಟಿ ಹೀಗಿದೆ: ಜೂನ್ 21-ಪ್ರಥಮ ಭಾಷೆ (ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್ ಮತ್ತು ಸಂಸ್ಕೃತ), ಜೂನ್ 24-ಗಣಿತ, ಜೂನ್ 28- ವಿಜ್ಞಾನ, ಜೂನ್ 30- ತೃತೀಯ ಭಾಷೆ (ಹಿಂದಿ, ಕನ್ನಡ, ಇಂಗ್ಲಿಷ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ ಮತ್ತು ತುಳು), ಜುಲೈ 2-ದ್ವಿತೀಯ ಭಾಷೆ (ಇಂಗ್ಲಿಷ್, ಕನ್ನಡ), ಜೂ.5-ಸಮಾಜ ಅಧ್ಯಯನ.

Join Whatsapp