ಎಸ್‍ಎಸ್‍ಎಲ್‍ಸಿ ಪರೀಕ್ಷೆ: 350 ವಿದ್ಯಾರ್ಥಿಗಳು ಗೈರು

Prasthutha|

ಮಂಗಳೂರು: ಜಿಲ್ಲೆಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ನಡೆಯುತ್ತಿದ್ದು, ಮಾ.28ರ ಸೋಮವಾರ ಪ್ರಥಮ ಭಾಷೆಯ ಪರೀಕ್ಷೆ ನಡೆಯಿತು.

- Advertisement -

ಮಂಗಳೂರು ಉತ್ತರ, ಮಂಗಳೂರು ದಕ್ಷಿಣ ಹಾಗೂ ಪುತ್ತೂರಿನಲ್ಲಿ ತಲಾ ಒಂದರಂತೆ ಒಟ್ಟು ಮೂರು ಖಾಸಗಿ ಕೇಂದ್ರಗಳು ಸೇರಿದಂತೆ ಜಿಲ್ಲೆಯ ಏಳು ತಾಲೂಕುಗಳಲ್ಲಿ ನಡೆಯುತ್ತಿರುವ ಪರೀಕ್ಷೆಯಲ್ಲಿ ಒಟ್ಟಾರೆ 29,542 ವಿದ್ಯಾರ್ಥಿಗಳ ಪೈಕಿ 29,192 ವಿದ್ಯಾರ್ಥಿಗಳು ಹಾಜರಾಗಿದಾರೆ. ಅವರ ಪೈಕಿ 350 ಮಂದಿ ಗೈರಾಗಿದ್ದಾರೆ. ಯಾವುದೇ ಡಿಬಾರ್ ಪ್ರಕರಣ ವರದಿಯಾಗಿಲ್ಲ, 12 ವಿದ್ಯಾರ್ಥಿಗಳು ವಿಶೇಷ ಕೊಠಡಿಯಲ್ಲಿ ಪರೀಕ್ಷೆ ಬರೆದಿದ್ದಾರೆ. ಉಳಿದಂತೆ ಕೋವಿಡ್ ಕೇರ್ ಸೆಂಟರ್‍ಗಳಲ್ಲಿ ಯಾವುದೇ ವಿದ್ಯಾರ್ಥಿಯೂ ಪರೀಕ್ಷೆ ಎದುರಿಸಿಲ್ಲ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Join Whatsapp