ಬೆಂಗಳೂರು: ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳು ಎಸ್ಎಸ್ಎಲ್ಸಿ, ಪಿಯುಸಿಯಲ್ಲಿ ಹೆಚ್ಚು ಅಂಕಗಳಿಸಿದರೆ ವೈಯಕ್ತಿಕ ಖರ್ಚಿನಲ್ಲಿ ದ್ವಿಚಕ್ರ ವಾಹನ ಕೊಡಿಸುವುದಾಗಿ ಸಚಿವ ಜಮೀರ್ ಅಹ್ಮದ್ ಖಾನ್ ಘೋಷಣೆ ಮಾಡಿದ್ದಾರೆ.
ಬೆಂಗಳೂರಿನಲ್ಲಿ ನಡೆದ ಅಲ್ಪಸಂಖ್ಯಾತ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಎಸ್ಎಸ್ಎಲ್ಸಿ, ಪಿಯುಸಿಯಲ್ಲಿ ಹೆಚ್ಚು ಅಂಕ ಗಳಿಸಿದ 32 ಜನ ವಿದ್ಯಾರ್ಥಿಗಳಿಗೆ ನನ್ನ ವೈಯಕ್ತಿಕ ಖರ್ಚಿನಲ್ಲಿ ದ್ವಿಚಕ್ರ ವಾಹನ ನೀಡುತ್ತೇನೆ. ಸ್ಥಳೀಯ ಏಜನ್ಸಿಗಳ ಮೂಲಕ ಅರ್ಹ ವಿಧ್ಯಾರ್ಥಿಗಳ ಮನೆಗಳಿಗೆ ವಾಹನ ತಲುಪಿಸುತ್ತೇವೆ ಎಂದು ಭರವಸೆ ನೀಡಿದರು.
ಎಷ್ಟು ದಿನ ನಾನು ಸಚಿವನಾಗಿ ಇರುತ್ತೇನೋ ಇಲ್ವೋ ಗೊತ್ತಿಲ್ಲ. ನಾನು ಜೀವಂತವಾಗಿ ಇರ್ತಿನೋ ಇಲ್ವೋ ಗೊತ್ತಿಲ್ಲ. ಯಾಕಂದ್ರೆ ದೇವರು ಹಣೆ ಬರಹ ಬರೆದಿರುತ್ತಾನೆ. ಮುಂದೆ ನಾನು ಮಂತ್ರಿ ಆಗ್ತಿನೋ, ಇರ್ತಿನೋ ಗೊತ್ತಿಲ್ಲ. ಈಗ ನನ್ನನ್ನ ಅಲ್ಪಸಂಖ್ಯಾತ ಸಚಿವರಾಗಿ ಮಾಡಿದ್ದಾರೆ. ಮುಂದಿನ ನಾಲ್ಕು ವರ್ಷ ನಮ್ಮ ಸರ್ಕಾರ ಇರುತ್ತದೆ. ನಾನೇ ಅಲ್ಪ ಸಂಖ್ಯಾತ ಮಂತ್ರಿ ಆಗಿ ಇರ್ತಿನಿ ಅನ್ನೋ ವಿಶ್ವಾಸ ಇದೆ ಎಂದು ಹೇಳಿದ್ದಾರೆ.