Home ಟಾಪ್ ಸುದ್ದಿಗಳು SSLC ಫಲಿತಾಂಶ: ಬಾಗಲಕೋಟೆಯ ಅಂಕಿತಾ ಬಸಪ್ಪ ಕೊನ್ನೂರು ರಾಜ್ಯಕ್ಕೆ ಪ್ರಥಮ

SSLC ಫಲಿತಾಂಶ: ಬಾಗಲಕೋಟೆಯ ಅಂಕಿತಾ ಬಸಪ್ಪ ಕೊನ್ನೂರು ರಾಜ್ಯಕ್ಕೆ ಪ್ರಥಮ

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು 2023-24ನೇ ಪ್ರಸಕ್ತ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶವನ್ನು ಪ್ರಕಟಿಸಿದೆ.

ಅದರಲ್ಲಿಯೂ ಬಾಗಲಕೋಟೆ ಜಿಲ್ಲೆಯ ಮುಧೋಳದ ಮೆಳ್ಳಿಗೇರಿ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿ ಅಂಕಿತಾ ಬಸಪ್ಪ ಕೊನ್ನೂರು 625/625ಕ್ಕೆ ಅಂಕ ಪಡೆದುಕೊಳ್ಳುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ಒಟ್ಟು 7 ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.


ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳ ವಿವರ
• ಅಂಕಿತಾ ಬಸಪ್ಪ ಕೊನ್ನೂರು (ಬಾಗಲಕೋಟೆ) 625/625 (ಪ್ರಥಮ)
• ಮೇದಾ ಪಿ ಶೆಟ್ಟಿ (ಬೆಂಗಳೂರು) 625ಕ್ಕೆ 624 ಅಂಕ
• ಹರ್ಷಿತಾ ಡಿಎಂ (ಮಧುಗಿರಿ) 625ಕ್ಕೆ 624 ಅಂಕ
• ಚಿನ್ಮಯ್ (ದಕ್ಷಿಣ ಕನ್ನಡ)
• ಸಿದ್ದಾಂತ್ (ಚಿಕ್ಕೊಡಿ )
• ದರ್ಶನ್ (ಶಿರಸಿ)
• ಚಿನ್ಮಯ್ (ಶಿರಸಿ)
• ಶ್ರೀರಾಮ್ (ಶಿರಸಿ)

Join Whatsapp
Exit mobile version