Home ಟಾಪ್ ಸುದ್ದಿಗಳು ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ | 99.9% ವಿದ್ಯಾರ್ಥಿಗಳು ಉತ್ತೀರ್ಣ

ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ | 99.9% ವಿದ್ಯಾರ್ಥಿಗಳು ಉತ್ತೀರ್ಣ

ಬೆಂಗಳೂರು: ಪ್ರಸಕ್ತ ಸಾಲಿನ ಎಸ್ಎಸ್ಎಲ್ ಸಿ ಫಲಿತಾಂಶ ಪ್ರಕಟವಾಗಿದ್ದು, ಶೇಕಡಾ 99.9ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ಜುಲೈ 19 ಮತ್ತು 22ರಂದು ನಡೆದಿದ್ದ ಎಸ್ ಎಸ್ಎಲ್ ಸಿ ಪರೀಕ್ಷೆಯಲ್ಲಿ ಹಾಜರಾಗಿದ್ದ 8,71,443 ವಿದ್ಯಾರ್ಥಿಗಳಲ್ಲಿ ಒಂದು ವಿದ್ಯಾರ್ಥಿ ಹೊರತುಪಡಿಸಿ ಉಳಿದೆಲ್ಲರೂ ತೇರ್ಗಡೆಯಾಗಿದ್ದಾರೆ ಎಂದು ಸಚಿವ ಬಿ ಸಿ ನಾಗೇಶ್ ತಿಳಿಸಿದ್ದಾರೆ.

  ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್,  4,70,160 ವಿದ್ಯಾರ್ಥಿಗಳು ಉತ್ತೀರ್ಣ ಆಗಿದ್ದಾರೆ. ಆದರೆ, ಓರ್ವ ವಿದ್ಯಾರ್ಥಿ ಮಾತ್ರ ಪರೀಕ್ಷೆಗೆ ಗೈರಾಗಿದ್ದು, ಉಳಿದ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣ ಎಂದು ಪ್ರಕಟಿಸಿದರು.

2,50,317 ವಿದ್ಯಾರ್ಥಿಗಳು ಎ ಗ್ರೇಡ್, 2,87,694 ವಿದ್ಯಾರ್ಥಿಗಳು ಬಿ ಗ್ರೇಡ್ ಹಾಗೂ 1,1,610 ವಿದ್ಯಾರ್ಥಿಗಳು ಸಿ ಗ್ರೇಡ್ ಪಡೆದುಕೊಂಡಿದ್ದಾರೆ.ಇದರಲ್ಲಿ ಶೇ.9ರಷ್ಟು ವಿದ್ಯಾರ್ಥಿಗಳು ಕೃಪಾಂಕ ಪಡೆದು ಉತ್ತೀರ್ಣ ಆಗಿದ್ದಾರೆ. 13 ವಿದ್ಯಾರ್ಥಿಗಳಿಗೆ ವಿಷಯವೊಂದಕ್ಕೆ ಗರಿಷ್ಟ 28 ಕೃಪಾಂಕ ನೀಡಿ ಪಾಸ್ ಮಾಡಲಾಗಿದೆ ಎಂದು ತಿಳಿಸಿದರು.

ಅದೇ ರೀತಿ, 157 ಮಕ್ಕಳು 625 ಕ್ಕೆ 625 ಅಂಕ ಪಡೆದಿದ್ದಾರೆ, 289 ವಿದ್ಯಾರ್ಥಿಗಳು 625ಕ್ಕೆ 623 ಅಂಕ ಪಡೆದಿದ್ದರೆ, ಇಬ್ಬರಿಗೆ 622 ಅಂಕ ಸಿಕ್ಕಿದೆ. 621 ಅಂಕ 449 ವಿದ್ಯಾರ್ಥಿಗಳು ಅಂಕ ಪಡೆದಿದ್ದಾರೆ. 28 ವಿದ್ಯಾರ್ಥಿಗಳು 620 ಅಂಕ  ಪಡೆದಿದ್ದಾರೆ. ಅಲ್ಲದೆ, ಪ್ರಥಮ ಭಾಷೆ ಕನ್ನಡದಲ್ಲಿ  25,702 ಮಕ್ಕಳು 125ಕ್ಕೆ 125ಕ್ಕೆ ಅಂಕ ಪಡೆದಿದ್ದಾರೆ.

ದ್ವಿತೀಯ 36,628 ವಿದ್ಯಾರ್ಥಿಗಳು, ತೃತೀಯ ಭಾಷೆ 36,776, ಗಣಿತ 6,321, ವಿಜ್ಞಾನ 3,649, ಸಮಾಜ ವಿಜ್ಞಾನ 9,367 ವಿದ್ಯಾರ್ಥಿಗಳು 100ಕ್ಕೆ 100 ಅಂಕ ಪಡೆದಿದ್ದಾರೆ ಎಂದು ವಿವರಿಸಿದರು.

ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳು ಆನ್ ಲೈನ್ ಮೂಲಕ sslc.Karnataka.gov.in, ಅಥವಾ‌ examresults.net ಮತ್ತು indiaresults.com  ನಲ್ಲಿ ಫಲಿತಾಂಶ ನೋಡಬಹುದಾಗಿದೆ.

Join Whatsapp
Exit mobile version