ಆಗಸ್ಟ್ 10ರಂದು ಎಸ್ ಎಸ್ ಎಲ್ ಸಿ ಫಲಿತಾಂಶ: ಸುರೇಶ್ ಕುಮಾರ್

Prasthutha|

ಬೆಂಗಳೂರು, ಜು.20: ಕೊರೊನಾ ಹಿನ್ನೆಲೆಯಲ್ಲಿ ಈ ಬಾರಿ ಎರಡು ದಿನ ಮಾತ್ರ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸಲಾಗುತ್ತಿದ್ದು, ಆಗಸ್ಟ್ 10ಕ್ಕೆ ಪರೀಕ್ಷೆಗಳ ಫಲಿತಾಂಶವನ್ನು ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

- Advertisement -

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿಯ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಕೇವಲ ಬಹು ಆಯ್ಕೆ ಮಾದರಿ ಉತ್ತರಗಳಲ್ಲಿ ಸರಿ ಉತ್ತರಗಳನ್ನು ಒಎಂಆರ್ ಶೀಟ್ ನಲ್ಲಿ ಗುರುತಿಸಬೇಕಷ್ಟೇ. ಹಾಗಾಗಿ ಮೌಲ್ಯಮಾಪನಕ್ಕೆ ಹೆಚ್ಚಿನ ಕಾಲಾವಕಾಶ ಬೇಕಾಗುವುದಿಲ್ಲ. ಈ ಹಿನ್ನೆಲೆಯಲ್ಲಿ ಆ. 10ಕ್ಕೆ ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ.

Join Whatsapp