ಮೇ 3 ನೇ ವಾರದಲ್ಲಿ SSLC ಫಲಿತಾಂಶ ಪ್ರಕಟ: ಸಚಿವ ನಾಗೇಶ್

Prasthutha|

ಬೆಂಗಳೂರು: SSLC ಪರೀಕ್ಷೆ ಫಲಿತಾಂಶ ಇದೇ ತಿಂಗಳ ಮೂರನೇ ವಾರದಲ್ಲಿ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಹೇಳಿದ್ದಾರೆ.

- Advertisement -

ಈ ಕುರಿತು ವಿಧಾನಸೌಧದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಈಗಾಗಲೇ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮುಗಿದಿದೆ. ಫಲಿತಾಂಶದ ತಯಾರಿಯ ಕೊನೆಯ ಘಟ್ಟದಲ್ಲಿ ಕೆಲಸ ನಡೆಯುತ್ತಿದೆ. ಮೂರನೇ ವಾರ ಫಲಿತಾಂಶ ಲಭ್ಯವಾಗಲಿದೆ ಎಂದು ತಿಳಿಸಿದರು.

ಪರೀಕ್ಷಾ ಫಲಿತಾಂಶಕ್ಕಾಗಿ ವಿದ್ಯಾರ್ಥಿಗಳು ಕಾಯುತ್ತಿದ್ದು, ಮೂರನೇ ವಾರದಲ್ಲಿ ಪ್ರಕಟಿಸುವುದಾಗಿ ಸಚಿವರು ತಿಳಿಸಿದ್ದಾರೆ. ಆದರೆ ದಿನಾಂಕವನ್ನು ಅವರು ಘೋಷಿಸಿಲ್ಲ.

- Advertisement -

ಮಾರ್ಚ್ 28ರಿಂದ ರಾಜ್ಯಾದ್ಯಂತ ಪರೀಕ್ಷೆ ಆರಂಭವಾಗಿತ್ತು. ಈ ಬಾರಿ 8,73,846 ವಿದ್ಯಾರ್ಥಿಗಳು ಎಸ್ಎಸ್ಎಲ್ಸಿ ಪರೀಕ್ಷೆ ಬರೆದಿದ್ದಾರೆ.

Join Whatsapp