ಬೆಂಗಳೂರು; ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟಗೊಂಡಿದ್ದು ಈ ಬಾರಿ ಶೇಕಡಾ 85.63ರಷ್ಟು ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ಎಂದಿನಂತೆ ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.
ಈ ಬಾರಿ 145 ವಿದ್ಯಾರ್ಥಿಗಳು 625ಕ್ಕೆ 625 ಅಂಕ ಪಡೆದಿದ್ದಾರೆ. 309 ವಿದ್ಯಾರ್ಥಿಗಳು 624 ಅಂಕ, 472 ವಿದ್ಯಾರ್ಥಿಗಳು 623 ಅಂಕ, 615 ವಿದ್ಯಾರ್ಥಿಗಳು 622 ಅಂಕಗಳೊಂದಿಗೆ ತೇರ್ಗಡೆ ಹೊಂದಿದ್ದಾರೆ. 20 ಶಾಲೆಗಳಲ್ಲಿ ಶೂನ್ಯ ಫಲಿತಾಂಶ. ಈ ಬಾರಿ ಜಿಲ್ಲಾವಾರು ಫಲಿತಾಂಶದ ಬದಲು ABC ಗ್ರೇಡ್ ಆಧಾರದಲ್ಲಿ ಫಲಿತಾಂಶ ಪ್ರಕಟಿಸಲಾಗಿದೆ. ಬೆಂಗಳೂರು ದಕ್ಷಿಣ ಮತ್ತು ಯಾದಗಿರಿ ಜಿಲ್ಲೆB ಗ್ರೇಡ್ ನಲ್ಲಿದ್ದರೆ. ಉಳಿದ ಎಲ್ಲಾ ಜಿಲ್ಲೆಗಳು A ಗ್ರೇಡ್ ನಲ್ಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣ ಸಚಿವ ಎನ್ ನಾಗೇಶ್ ತಿಳಿಸಿದ್ದಾರೆ.