SSLC ಮರು ಮೌಲ್ಯಮಾಪನ ಫಲಿತಾಂಶ ಪ್ರಕಟ: ಮೈಸೂರಿನ ಸುದೀಕ್ಷಾ ರಾಜ್ಯಕ್ಕೆ 2ನೇ ಸ್ಥಾನ

Prasthutha|

ಮೈಸೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ 2024ನೇ ಸಾಲಿನ ಎಸ್ ಎಸ್ ಎಲ್ ಸಿ ಮರು ಮೌಲ್ಯಮಾಪನ ಫಲಿತಾಂಶ ಪ್ರಕಟಸಿದ್ದು, ಮೈಸೂರಿನ ದಿನೇಶ್ ಎಂಬುವರ ಅವರ ಪುತ್ರಿ, ವಿದ್ಯಾರ್ಥಿನಿ ಸುದೀಕ್ಷಾ ಎಂ.ಡಿ ರಾಜ್ಯಕ್ಕೆ ಎರಡನೇ ಟಾಪರ್ ಆಗಿದ್ದಾರೆ.

- Advertisement -


ಮರು ಮೌಲ್ಯಮಾಪನದಲ್ಲಿ 625ಕ್ಕೆ 624 ಅಂಕಗಳನ್ನು ಪಡೆಯುವ ಮೂಲಕ ದ್ವಿತೀಯ ಸ್ಥಾನವನ್ನು ಅಲಂಕರಿಸಿದ್ದಾರೆ.


ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟದಾಗ ವಿದ್ಯಾರ್ಥಿನಿ ಸುದೀಕ್ಷಾ ಎಂ.ಡಿ ಅವರಿಗೆ 625ಕ್ಕೆ 620 ಅಂಕಗಳು ಬಂದಿದ್ದವು. ಐದು ವಿಷಯಗಳಲ್ಲಿ 100ಕ್ಕೆ 100 ಅಂಕ ಪಡೆದಿದ್ದ ಸುದೀಕ್ಷ ಎಂ.ಡಿ ಅವರಿಗೆ ಗಣಿತ ವಿಷಯದಲ್ಲಿ 95 ಅಂಕಳು ಬಂದಿದ್ದವು.



Join Whatsapp