ವಿಟ್ಲ: SSLC ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

Prasthutha|

ವಿಟ್ಲ: ಬಾಲಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಅಳಿಕೆ ಗ್ರಾಮದ ನೆಕ್ಕಿತಪುಣಿ ಎಂಬಲ್ಲಿ ತಡ ರಾತ್ರಿ ನಡೆದಿದೆ.

- Advertisement -

ಸಂದೀಪ್ ಅನಿಸಿತ್ ಡಿಸೋಜ(15) ಆತ್ಮಹತ್ಯೆಗೆ ಶರಣಾದ ಬಾಲಕ ಎಂದು ಗುರುತಿಸಲಾಗಿದೆ.

ಬೆಳಿಗ್ಗೆ ಮನೆಯವರು ನೋಡಿದಾಗ ಕೋಣೆಯಲ್ಲಿ ಬಾಲಕನ ಮೃತದೇಹ ನೇಣು ಹಾಕಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

- Advertisement -

ಸಂದೀಪ್ 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದು, ಸರಿಯಾಗಿ ಶಾಲೆ ಹೋಗುತ್ತಿರಲಿಲ್ಲ ಎನ್ನಲಾಗಿದೆ.  ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.‌

Join Whatsapp