Home ಕರಾವಳಿ ವಿಟ್ಲ: SSLC ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

ವಿಟ್ಲ: SSLC ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

ವಿಟ್ಲ: ಬಾಲಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಅಳಿಕೆ ಗ್ರಾಮದ ನೆಕ್ಕಿತಪುಣಿ ಎಂಬಲ್ಲಿ ತಡ ರಾತ್ರಿ ನಡೆದಿದೆ.

ಸಂದೀಪ್ ಅನಿಸಿತ್ ಡಿಸೋಜ(15) ಆತ್ಮಹತ್ಯೆಗೆ ಶರಣಾದ ಬಾಲಕ ಎಂದು ಗುರುತಿಸಲಾಗಿದೆ.

ಬೆಳಿಗ್ಗೆ ಮನೆಯವರು ನೋಡಿದಾಗ ಕೋಣೆಯಲ್ಲಿ ಬಾಲಕನ ಮೃತದೇಹ ನೇಣು ಹಾಕಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಸಂದೀಪ್ 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದು, ಸರಿಯಾಗಿ ಶಾಲೆ ಹೋಗುತ್ತಿರಲಿಲ್ಲ ಎನ್ನಲಾಗಿದೆ.  ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.‌

Join Whatsapp
Exit mobile version