ಪರೀಕ್ಷಾ ದಿನವೇ SSLC ವಿದ್ಯಾರ್ಥಿ ಆತ್ಮಹತ್ಯೆ

Prasthutha|

ಶಿವಮೊಗ್ಗ: ಪರೀಕ್ಷಾ ದಿನವೇ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಯಡೇಹಳ್ಳಿ ಗ್ರಾಮದಲ್ಲಿ ನಡೆದಿದೆ.

- Advertisement -

ಪರಶುರಾಮ್ ಬಾಬು (16) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಆನಂದಪುರದ KPSC ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ, ಚೆನ್ನಾಗಿಯೇ ಓದುತ್ತಿದ್ದ. ಪರೀಕ್ಷೆಗೆ ಎಲ್ಲಾ ಸಿದ್ಧತೆಯನ್ನೂ ಮಾಡಿಕೊಂಡಿದ್ದ. ಆದ್ರೆ ಕೊನೇ ಕ್ಷಣದಲ್ಲಿ ಭಯದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪ್ರಾಥಮಿಕ ಮೂಲಗಳಿಂದ ತಿಳಿದುಬಂದಿದೆ. ಈ ಸಂಬಂಧ ಆನಂದಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



Join Whatsapp