ವಸತಿ ಶಾಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ SSLC ವಿದ್ಯಾರ್ಥಿನಿ

Prasthutha|

ರಾಯಚೂರು: ಜಿಲ್ಲೆಯ ದೇವದುರ್ಗ ಪಟ್ಟಣದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಓರ್ವ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

- Advertisement -

ಬಿ.ಆರ್ ಗುಂಡಾ ಗ್ರಾಮದ ವಿದ್ಯಾರ್ಥಿನಿ ಪವಿತ್ರಾ(15) ಮೃತ ಬಾಲಕಿ. ಇವರು 10 ನೇ ತರಗತಿ ಓದುತ್ತಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಇನ್ನು ವಿಷಯ ತಿಳಿಯುತ್ತಿದ್ದಂತೆ, ಶಾಲೆಗೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

Join Whatsapp