ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗದ ವಿದ್ಯಾರ್ಥಿಗಳಿಗೆ ರಾಜ್ಯಾದ್ಯಂತ ನಾಳೆಯಿಂದ ಜುಲೈ 4ರವರೆಗೆ ಪೂರಕ ಪರೀಕ್ಷೆ ನಡೆಯಲಿದೆ ಎಂದು ಕರ್ನಾಟಕ ರಾಜ್ಯ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ತಿಳಿಸಿದೆ.
ರಾಜ್ಯಾದ್ಯಂತ 423 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು ಪರೀಕ್ಷೆಗೆ ಒಟ್ಟು 11,415 ಶಾಲೆಗಳಿಂದ 63,363 ವಿದ್ಯಾರ್ಥಿಗಳು, 31,283 ವಿದ್ಯಾರ್ಥಿನಿಯರು ಹಾಗೂ ಮೂವರು ತೃತೀಯ ಲಿಂಗಿಗಳು ಸೇರಿ ಒಟ್ಟು 94,649 ಮಕ್ಕಳು ನೋಂದಣಿ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಜೊತೆಗೆ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲೂ ಸಿಸಿಟಿವಿ ಕ್ಯಾಮರಾಗಳನ್ನು ಕಡ್ಡಾಯವಾಗಿ ಅಳವಡಿಸಬೇಕೆಂದು ಕರ್ನಾಟಕ ರಾಜ್ಯ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಮಾಹಿತಿ ನೀಡಿದೆ.