Home ಟಾಪ್ ಸುದ್ದಿಗಳು ಸಂತ ಅಲೋಶಿಯಸ್ ಕಾಲೇಜಿಗೆ ಪರಿಗಣಿತ ವಿಶ್ವ ವಿದ್ಯಾಲಯದ ಸ್ಥಾನಮಾನ

ಸಂತ ಅಲೋಶಿಯಸ್ ಕಾಲೇಜಿಗೆ ಪರಿಗಣಿತ ವಿಶ್ವ ವಿದ್ಯಾಲಯದ ಸ್ಥಾನಮಾನ

ಮಂಗಳೂರು: ಸಂತ ಅಲೋಶಿಯಸ್ ಕಾಲೇಜಿನ (ಸ್ವಾಯತ್ತ) ವಿಶ್ವವಿದ್ಯಾನಿಲಯದ ಸ್ಥಾನಮಾನದ ಪ್ರಸ್ತಾವನೆಯನ್ನು ವಿಶ್ವವಿದ್ಯಾನಿಲಯ ಧನಸಹಾಯ ಆಯೋಗ (ಯುಜಿಸಿ) ಮತ್ತು ಭಾರತ ಸರಕಾರದ ಶಿಕ್ಷಣ ಸಚಿವಾಲಯವು ಅನುಮೋದಿಸಿ ಪರಿಗಣಿತ ವಿಶ್ವವಿದ್ಯಾನಿಲಯದ ಸ್ಥಾನಮಾನವನ್ನು ನೀಡಿದೆ.


ಈ ಸ್ಥಾನಮಾನದೊಂದಿಗೆ ಸಂಸ್ಥೆಯು ಇನ್ನು ಮುಂದೆ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯ ಎಂದು ಕರೆಯಲ್ಪಡುತ್ತದೆ.


ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅಲೋಶಿಯಸ್ ಶಿಕ್ಷಣ ಸಂಸ್ಥೆಗಳ ರೆಕ್ಟರ್ ರೆ. ಫಾ. ಮೆಲ್ವಿನ್ ಜೆ. ಪಿಂಟೋ, ಈ ಸ್ಥಾನಮಾನ ದೊಂದಿಗೆ ಸಂಸ್ಥೆಯು ಇನ್ನು ಮುಂದೆ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯ ಎಂದು ಕರೆಯಲ್ಪಡುತ್ತದೆ. ಗುಣ ಮಟ್ಟದ ಉನ್ನತ ಶಿಕ್ಷಣವನ್ನು ನೀಡಿ ಶೈಕ್ಷಣಿಕ ಸೇವೆ ಸಲ್ಲಿಸಬೇಕೆಂದು ಬಹುದಿನಗಳಿಂದ ಅವಕಾಶದ ನಿರೀಕ್ಷೆಯಲ್ಲಿದ್ದ ಕಾಲೇಜಿನ ಆಡಳಿತ ಮಂಡಳಿಗೆ ಈ ಸ್ಥಾನಮಾನವು ವಿಶೇಷ ಸಂತಸವನ್ನು ತಂದಿದೆ ಎಂದರು.

Join Whatsapp
Exit mobile version