ಸೈಂಟ್ ಮೇರಿಸ್ ಚರ್ಚ್ ಮೇಲೆ ದುಷ್ಕರ್ಮಿಗಳ ದಾಳಿ: ಘಟನಾ ಸ್ಥಳಕ್ಕೆ ಎಸ್.ಡಿ.ಪಿ.ಐ. ನಿಯೋಗ ಭೇಟಿ

Prasthutha|

ಮೈಸೂರು: ಪಿರಿಯಾಪಟ್ಟಣ ನಗರದ ಗೋಣಿಕೊಪ್ಪ ರಸ್ತೆಯಲ್ಲಿರುವ ಸೆಂಟ್ ಸೈಂಟ್ ಚರ್ಚ್ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿರುವ ಘಟನೆಯ ಹಿನ್ನೆಲೆಯಲ್ಲಿ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಅವರ ನೇತೃತ್ವದಲ್ಲಿ ಎಸ್.ಡಿ.ಪಿ.ಐ ನಿಯೋಗ ಶುಕ್ರವಾರ ಸ್ಥಳಕ್ಕೆ ಭೇಟಿ ನೀಡಿತು.

- Advertisement -

ಈ ಸಂದರ್ಭದಲ್ಲಿ ಚರ್ಚಿನ ಗುರುಗಳಾದ  ಜಾನ್ ಪೌಲ್ ರವರನ್ನು ಭೇಟಿ ಮಾಡಿ ಘಟನೆಯನ್ನು ಖಂಡಿಸಲಾಯಿತು.

ಈ ಸಂದರ್ಭದಲ್ಲಿ  ಮಾತನಾಡಿದ ಎಸ್.ಡಿ.ಪಿ.ಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್, ಈ ದೇಶಕ್ಕೆ ಮತ್ತು ನಾಡಿಗೆ ಕ್ರೈಸ್ತ ಸಮುದಾಯ  ವೈದ್ಯಕೀಯ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಬಹಳಷ್ಟು ಕೊಡುಗೆಗಳನ್ನು ನೀಡಿವೆ. ಇಂತಹ ಸಮುದಾಯದ ಪ್ರಾರ್ಥನಾ ಮಂದಿರದ ಮೇಲೆ ದುಷ್ಕರ್ಮಿಗಳ ದಾಳಿ ನಡೆದಿರುವುದು ಖಂಡನೀಯ. ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಸರ್ಕಾರದ ಕಡೆಯಿಂದ ಚರ್ಚಿನ ಫಾದರ್ ಅವರಿಗೆ ನೈತಿಕ ಬಲ ತುಂಬಬೇಕು. ಹಾಗೂ ರಾಜ್ಯದ ಯಾವ ಭಾಗದಲ್ಲೂ ಇಂತಹ ಕೃತ್ಯಗಳು ನಡೆಯದಂತೆ ಕರ್ನಾಟಕ ಸರ್ಕಾರ ಪೊಲೀಸ್ ಇಲಾಖೆಗೆ ಗೃಹಮಂತ್ರಿಗಳು ಹಾಗೂ ಮುಖ್ಯಮಂತ್ರಿಗಳು ಸೂಚನೆ ನೀಡಬೇಕು. ಇಂತಹ ಕೃತ್ಯಗಳನ್ನು ಮರುಕಳಿಸಿದರೆ ನಮ್ಮ ಪಕ್ಷ ಬೀದಿಗಿಳಿದು ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

- Advertisement -

ಪಿರಿಯಾಪಟ್ಟಣದ ಸೈಂಟ್ ಮೇರಿಸ್ ಚರ್ಚಿನ ಗುರುಗಳಿಗೆ ನೈತಿಕ ಬೆಂಬಲವನ್ನು ನೀಡುವುದರ ಜೊತೆಗೆ ಪಕ್ಷವು ಸದಾ ಕಾಲ ಅವರ ಬೆಂಬಲಕ್ಕೆ ಇರುತ್ತದೆ ಎಂದು ಅವರು ತಿಳಿಸಿದರು.

ಈ ದಾಳಿ ನಡೆಸಿದ ದುಷ್ಕರ್ಮಿಗಳನ್ನು ಕೂಡಲೇ ಬಂಧಿಸಿ ಕಾನೂನು ಕ್ರಮವನ್ನು ಕೈಗೊಳ್ಳಬೇಕು ಎಂದು ಇದೇ ಸಂದರ್ಭದಲ್ಲಿ ಮಜೀದ್’ರವರು ಸರ್ಕಾರವನ್ನು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಮೈಸೂರು ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ಮಜಾಝ್ ಅಹಮದ್, ಮೈಸೂರು ನಗರಾಧ್ಯಕ್ಷರಾದ ರಫತ್ ಖಾನ್, ಮೈಸೂರು ನಗರ ಉಪಾಧ್ಯಕ್ಷರಾದ ಹಾಗು ಮಾಜಿ ಮಹಾನಗರ ಪಾಲಿಕೆ ಸದಸ್ಯ ಎಸ್. ಸ್ವಾಮಿ, ಪಿರಿಯಾಪಟ್ಟಣ ತಾಲ್ಲೂಕು ಅಧ್ಯಕ್ಷರಾದ ಮುಬೀರ್ ಅಹಮದ್, ಪಿರಿಯಾಪಟ್ಟಣ ತಾಲ್ಲೂಕು ಎಸ್‌ಡಿಪಿಐ ಮುಖಂಡರಾದ ವೆಂಕಟೇಶ, ಜಿಲ್ಲಾ ಕಾರ್ಯದರ್ಶಿ ಸತೀಶ ಸಣ್ಣೇನಹಳ್ಳಿ, ಹುಣಸೂರು ತಾಲ್ಲೂಕು ಅಧ್ಯಕ್ಷರಾದ ಮುಹಮ್ಮದ್ ತಬ್ರೇಝ್ ತಾಲ್ಲೂಕು ಕಾರ್ಯದರ್ಶಿ ಮುಸ್ತಫ ಖಾನ್, ನಗರಸಭಾ ಸದಸ್ಯರುಗಳಾದ ಸೈಯದ್ ಯೂನುಸ್, ಸಮೀನ ಇಮ್ರಾನ್ ಅವರು ಉಪಸ್ಥಿತರಿದ್ದರು.

Join Whatsapp