ಎಸ್ ಟಿ ಸೋಮಶೇಖರ್ ಅಡ್ಡಮತದಾನ: ಕ್ರಮ ಕೈಗೊಳ್ಳುವ ಬಗ್ಗೆ ಅಶೋಕ್ ಹೇಳಿದ್ದೇನು?

Prasthutha|

ಬೆಂಗಳೂರು: ಶಾಸಕ ಎಸ್.ಟಿ ಸೋಮಶೇಖರ್ ಅವರು ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಅಥವಾ ಮೈತ್ರಿ ಅಭ್ಯರ್ಥಿಗೆ ಮತ ಹಾಕುವ ಬದಲು ಕಾಂಗ್ರೆಸ್ ನ ಮೂರನೇ ಅಭ್ಯರ್ಥಿಗೆ ಮತ ಹಾಕಿದ್ದಾರೆ. ಹೀಗಾಗಿ ಅವರ ವಿರುದ್ಧ ಕ್ರಮಕ್ಕೆ ಬಿಜೆಪಿ ಮುಂದಾಗಿದೆ.

- Advertisement -


ಈ ಬಗ್ಗೆ ಮಾತನಾಡಿದ ವಿರೋಧ ಪಕ್ಷದ ನಾಯಕ ಆರ್ ಅಶೋಕ್, ವಕೀಲ ವಿವೇಕ್ ರೆಡ್ಡಿ ಅವರ ಜೊತೆ ಚರ್ಚೆ ಮಾಡಿದ್ದೇನೆ. ಅವರು ಏನೆಲ್ಲಾ ಮಾಡಬಹುದು ಎಂದು ತಿಳಿಸಿದ್ದಾರೆ ಎಂದು ಹೇಳಿದರು.
ಎಸ್.ಟಿ. ಸೋಮಶೇಖರ್, ಶಿವರಾಮ ಹೆಬ್ಬಾರ್ ಗೂ ವಿಪ್ ಕಳಿಸಿದ್ದೆವು. ಕೊನೆಯ ಕ್ಷಣದವರೆಗೂ ನಮ್ಮ ಜೊತೆ ಮಾತಾಡಿದ್ದರು. ನಾವು ಪಕ್ಷಕ್ಕೆ ಮೋಸ ಮಾಡಲ್ಲ ಅಂದಿದ್ದರು. ತಾಯಿಗೆ ಮೋಸ ಮಾಡಲ್ಲ ಅಂದಿದ್ದರು. ಆದ್ರೆ, ಸೋಮಶೇಖರ್ ಅಡ್ಡ ಮತದಾನ ಮಾಡಿದ್ದಾರೆ ಅಂತ ಗೊತ್ತಾಗಿದೆ. ಈ ರೀತಿ ಪದೇ ಪದೇ ಮೋಸ ಮಾಡುವುದನ್ನು ಜನ ಸಹಿಸಲ್ಲ ಎಂದರು.


ಸೋಮಶೇಖರ್ ಮಂತ್ರಿ ಮಾಡಿ, ಮೈಸೂರು ಉಸ್ತುವಾರಿ ಮಾಡಿದ್ದೆವು. ಅಭಿವೃದ್ಧಿಗೆ ಹಣ ಅಂತಾರೆ. ಹಿಂದೆ ಎಷ್ಟು ಬಾರಿ ಹಣ ಕೊಟ್ಟಿಲ್ಲ? ಇಂದು ಸೋಮಶೇಖರ್ ರಾಜಕೀಯವಾಗಿ ಸೂಸೈಡ್ ಮಾಡಿಕೊಂಡಿದ್ದಾರೆ. ಸೋಮಶೇಖರ್ ಅವರೇ ನಿನ್ನೆ ಕರೆ ಮಾಡಿ ದ್ರೋಹ ಬಗೆಯಲ್ಲ ಎಂದು ಹೇಳಿದ್ದರು. ಸೋಮಶೇಖರ್ ಡಿ.ಕೆ. ಶಿವಕುಮಾರ್ ಜೊತೆಗೆ, ಸಿದ್ದರಾಮಯ್ಯ ಜೊತೆಗೆ ಓಡಾಡುವಾಗಲೇ ಗುಮಾನಿ ಇತ್ತು. ಜನ ಅವರನ್ನು ಕ್ಷಮಿಸಲ್ಲ ಎಂದು ಕಿಡಿಕಾರಿದರು.

Join Whatsapp