ಐಎಎಸ್ ಅಧಿಕಾರಿಗಳ ಜಗಳ ನನ್ನ ಕೈ ಮೀರಿ ಹೋಗಿದೆ : ಅಸಹಾಯಕತೆ ವ್ಯಕ್ತಪಡಿಸಿದ ಸಚಿವ ಸೋಮಶೇಖರ್

Prasthutha|

ಮೈಸೂರು: ಐಎಎಸ್ ಅಧಿಕಾರಿಗಳ ನಡುವಿನ ಜಗಳ ತಾರಕಕ್ಕೇರಿದ್ದು, ನನ್ನ ಕೈಮೀರಿ ಹೋಗಿರುವುದರಿಂದ ನನ್ನ ವ್ಯಾಪ್ತಿಯಲ್ಲಿ ಉಳಿದಿಲ್ಲ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ ಸೋಮಶೇಖರ್ ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.

ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮತ್ತು ಪಾಲಿಕೆಯ ಆಯುಕ್ತರಾದ ಶಿಲ್ಪಾನಾಗ್ ನಡುವಿನ ಜಗಳದ ಬಗ್ಗೆ ಮುಖ್ಯಮಂತ್ರಿಗಳ ಬಳಿ ಚರ್ಚಿಸಿದ್ದು, ಅವರು ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ ಎಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು ತಿಳಿಸಿದ್ದಾರೆ.

- Advertisement -

ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣಕ್ಕಾಗಿ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದೇನೆ. ಕೋವಿಡ್ ನಿಯಂತ್ರಣಕ್ಕೆ ಎಲ್ಲರ ಅಭಿಪ್ರಾಯ ಪಡೆದು ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ. ಇಷ್ಟೆಲ್ಲ ಒಳ್ಳೆಯ ಕೆಲಸ ಮಾಡಿಯೂ ನನ್ನ ಮನಸ್ಸಿಗೆ ನೋವಾಗಿದೆ. ಐಎಎಸ್ ಅಧಿಕಾರಿಗಳ ವಿಷಯ ಉಸ್ತುವಾರಿ ಸಚಿವರಿಗೂ ಮೀರಿದ್ದು, ಮುಖ್ಯಮಂತ್ರಿಗಳ ಜೊತೆ ಚರ್ಚಿಸಿದ್ದೇನೆ. ಮುಖ್ಯಕಾರ್ಯದರ್ಶಿಗಳ ಗಮನಕ್ಕೂ ತಂದಿದ್ದೇವೆ ಎಂದು ಸಚಿವರು ಹೇಳಿದ್ದಾರೆ.

- Advertisement -