ಬೋಳಿಯಾರ್ ನಲ್ಲಿ ಚೂರಿ ಇರಿದಿರುವುದು ಪೂರ್ವಯೋಜಿತ ಕೃತ್ಯ: ಆರ್. ಅಶೋಕ್

Prasthutha|

ಉಳ್ಳಾಲ: ಬೋಳಿಯಾರ್ ನಲ್ಲಿ ಬಿಜೆಪಿಯ ಇಬ್ಬರು ಕಾರ್ಯಕರ್ತರಿಗೆ ಚೂರಿ ಇರಿದಿರುವುದು ಪೂರ್ವಯೋಜಿತ ಕೃತ್ಯ ಎಂದು ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಹೇಳಿದರು.

- Advertisement -

ಬೋಳಿಯಾರ್ ಚೂರಿ ಇರಿತ ಪ್ರಕರಣದಲ್ಲಿ ಗಾಯಗೊಂಡ ಹರೀಶ್ ಹಾಗು ನಂದ ಕುಮಾರ್ ಅವರ ಆರೋಗ್ಯ ವಿಚಾರಿಸಿದ ಅವರು ಬಳಿಕ ಮಾಧ್ಯಮದ ಜೊತೆಗೆ ಬುಧವಾರ ಮಾತನಾಡಿದರು.


‘ಡ್ಯಾಗರ್ ನಿಂದ ಇರಿದಿರುವುದನ್ನು ಗಮನಿಸಿದರೆ ಇದೊಂದು ಪೂರ್ವಯೋಜಿತ ಕೃತ್ಯದಂತೆ ಕಾಣಿಸುತ್ತದೆ. ತಕ್ಷಣಕ್ಕೆ ಡ್ಯಾಗರ್ ಎಲ್ಲಿಂದ ಬರುತ್ತೇ. ಭಾರತ್ ಮಾತಾ ಕಿ ಜೈ ಅನ್ನುವ ಘೋಷಣೆ ವೀಡಿಯೋ ಗಮನಿಸಿದ್ದೇನೆ. ಮಸೀದಿ ಮುಂದೆ ಭಾರತ್ ಮಾತಾ ಕಿ ಜೈ ಅಂದಿದ್ದಾರೆ. ದೇಶದಲ್ಲಿ ಎಲ್ಲಿಯೂ ದೇಶಕ್ಕೆ ಜೈ ಅಂದಲ್ಲಿ ಸನ್ಮಾನ ಮಾಡ್ತಾರೆ, ಕರ್ನಾಟಕದಲ್ಲಿ ಹಾಗೂ ಮಂಗಳೂರು- ಉಡುಪಿ ಭಾಗದಲ್ಲಿ ಭಾರತ್ ಮಾತಾ ಕಿ ಜೈ ಅಂದಲ್ಲಿ ಡ್ಯಾಗರ್ನಿಂದ ಇರಿಯುವ ಕೃತ್ಯಗಳು ನಡೆಯುತ್ತಿವೆ. ರಾಜ್ಯದಲ್ಲಿರುವ ತಾಲಿಬಾನ್ ಸರ್ಕಾರವನ್ನು ಹೇಳೋರೂ ಕೇಳೋರು ಯಾರು ಇಲ್ಲದಾಗಿದೆ ಎಂದರು.

Join Whatsapp