ಸಿಡಿಮದ್ದು ತಾಲೀಮು ವೇಳೆ ಸಿಬ್ಬಂದಿಗೆ ಗಾಯ: ಆಸ್ಪತ್ರೆಗೆ ದಾಖಲು

Prasthutha|

ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಹಿನ್ನೆಲೆ ಸಿಡಿಮದ್ದು ತಾಲೀಮು ವೇಳೆ ಸಿಬ್ಬಂದಿ ಗಾಯಗೊಂಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಗಾಯಗೊಂಡ ಸಿಬ್ಬಂದಿಯನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

- Advertisement -


ನಿನ್ನೆ ಸಂಜೆ ಅರಮನೆ ಆವರಣದಲ್ಲಿ ಜಂಬೂಸವಾರಿಗೆ ಪುಷ್ಪಾರ್ಚನೆ ರಿಹರ್ಸಲ್ ನಡೆಸಲಾಗಿತ್ತು. ಈ ವೇಳೆ ರಾಷ್ಟ್ರಗೀತೆ ನುಡಿಸಿ 21 ಸುತ್ತು ಕುಶಾಲತೋಪು ಸಿಡಿಸಲಾಗಿತ್ತು. ಈ ಕುಶಾಲತೋಪು ಸಿಡಿದು ಸಿಬ್ಬಂದಿ ಗಾಯಗೊಂಡಿದ್ದಾರೆ. ಕೂಡಲೇ ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗಿದೆ.

Join Whatsapp