ಜಾತಿ ಗಣತಿಯನ್ನು ಜನಗಣತಿಯೊಂದಿಗೆ ಸಂಯೋಜಿಸಲು ಪ್ರಧಾನಿಗೆ ಮನವಿ ಮಾಡಿದ ಸ್ಟಾಲಿನ್

Prasthutha|

- Advertisement -

ಚೆನ್ನೈ: ದೇಶದಲ್ಲಿ ಜಾತಿ ಗಣತಿಯನ್ನು ಹತ್ತು ವರ್ಷಗಳಿಗೊಮ್ಮೆ ನಡೆಯುವ ಜನಗಣತಿಯೊಂದಿಗೆ ಸಂಯೋಜಿಸುವಂತೆ ತಮಿಳುನಾಡು ಸಿಎಂ ಪ್ರಧಾನಿ ನರೇಂದ್ರ ಮೋದಿಯವರಿಗೆ ಮನವಿ ಮಾಡಿದ್ದಾರೆ.

ಸಮಾಜದಲ್ಲಿ ಸಾಮಾಜಿಕ ಪ್ರಗತಿಗೆ ಜಾತಿ ಪ್ರಮುಖ ಅಂಶವಾಗಿದೆ. ಪ್ರಧಾನಿ ನರೇಂದ್ರ ಮೋದಿಯವರೇ, ಮುಂಬರುವ ರಾಷ್ಟ್ರೀಯ ಜನಗಣತಿಯೊಂದಿಗೆ ಜಾತಿ ಗಣತಿಯನ್ನು ಸಂಯೋಜಿಸಲು ನಾನು ನಿಮ್ಮನ್ನು ಒತ್ತಾಯಿಸುತ್ತೇನೆ. ಸಾಮಾಜಿಕ ನ್ಯಾಯ ಮತ್ತು ಅಂತರ್ಗತ ಬೆಳವಣಿಗೆಯನ್ನು ಉತ್ತೇಜಿಸಲು ಈ ಕ್ರಮ ಸೂಕ್ತವಾಗಿದೆ ಎಂದು ಬರೆದು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

- Advertisement -

ಜನಗಣತಿಯೊಂದಿಗೆ ಜಾತಿ ಗಣತಿಯನ್ನು ವಿಲೀನಗೊಳಿಸುವುದನ್ನು ವಿಳಂಬ ಮಾಡಿದರೆ ಸಮಾಜದಲ್ಲಿ ಮತ್ತಷ್ಟು ಅಸಮಾನತೆ ಉಂಟಾಗುತ್ತದೆ. ಈ ನಿರ್ಣಾಯಕ ವಿಚಾರದಲ್ಲಿ ವಿಳಂಬ ಮಾಡುವುದು ಅಸಮಾನತೆಯನ್ನು ಶಾಶ್ವತಗೊಳಿಸುತ್ತದೆ. ಜಾತಿ ಐತಿಹಾಸಿಕವಾಗಿ ನಮ್ಮ ಸಮಾಜದಲ್ಲಿ ಸಾಮಾಜಿಕ ಪ್ರಗತಿಯ ಭವಿಷ್ಯವನ್ನು ನಿರ್ಧರಿಸುವ ಪ್ರಮುಖ ಅಂಶ. ಹಾಗಾಗಿ ಅದರ ಬಗ್ಗೆ ವಾಸ್ತವಿಕ ಮಾಹಿತಿಯನ್ನು ಸಾರ್ವಜನಿಕ ವೇದಿಕೆಯಲ್ಲಿ ಲಭ್ಯವಾಗುವಂತೆ ಮಾಡುವುದು ಅತ್ಯಗತ್ಯ ಎಂದು ಸ್ಟಾಲಿನ್ ಪ್ರತಿಪಾದಿಸಿದ್ದಾರೆ.



Join Whatsapp