Home ಟಾಪ್ ಸುದ್ದಿಗಳು ಭಾರತ್ ಜೋಡೋ ಯಾತ್ರೆಯ ವೇಳೆ ನೂಕುನುಗ್ಗಲು : ಕೆ.ಸಿ. ವೇಣುಗೋಪಾಲ್ ಗೆ ಗಾಯ

ಭಾರತ್ ಜೋಡೋ ಯಾತ್ರೆಯ ವೇಳೆ ನೂಕುನುಗ್ಗಲು : ಕೆ.ಸಿ. ವೇಣುಗೋಪಾಲ್ ಗೆ ಗಾಯ

ಭೋಪಾಲ್: ಭಾರತ್ ಜೋಡೋ ಯಾತ್ರೆಯ ವೇಳೆ ಉಂಟಾದ ನೂಕುನುಗ್ಗಲಿನಿಂದಾಗಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಬಿದ್ದು ಗಾಯಗೊಂಡಿದ್ದು, ಅವರ ಕೈ ಮತ್ತು ಮೊಣಗಾಲಿಗೆ ಗಾಯಗಳಾಗಿವೆ.

ಮಧ್ಯಪ್ರದೇಶದ  ಇಂದೋರ್‌ನಲ್ಲಿ ಯಾತ್ರೆ ಸಾಗುತ್ತಿದ್ದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ನೋಡಲು ಅಭಿಮಾನಿಗಳು ಮುಗಿಬಿದ್ದಿದ್ದಾರೆ. ಈ ವೇಳೆ ನೂಕುನುಗ್ಗಲು ಉಂಟಾಗಿ ವೇಣುಗೋಪಾಲ್ ರನ್ನು ತಳ್ಳಿಕೊಂಡು ಅಭಿಮಾನಿಗಳು ನುಗ್ಗಿದ್ದಾರೆ. ಈ ವೇಳೆ ಬಿದ್ದ ವೇಣುಗೋಪಾಲ್ ಮೊಣಕಾಲು ಮತ್ತು ಕೈಗೆ ಗಾಯ ಮಾಡಿಕೊಂಡಿದ್ದಾರೆ.

ಪೊಲೀಸರು ಜನಸಂದಣಿಯನ್ನು  ನಿಯಂತ್ರಿಸಲು ವಿಫಲರಾದ್ದರಿಂದ ಕಾಲ್ತುಳಿತಕ್ಕೆ ಕಾರಣವಾಯಿತು ಎನ್ನಲಾಗಿದೆ.

ವೇಣುಗೋಪಾಲ್ ಭಾರತ್ ಜೋಡೋ ಯಾತ್ರೆಗಾಗಿ ಏರ್ಪಡಿಸಲಾಗಿದ್ದ ಶಿಬಿರದಲ್ಲಿ ಪ್ರಥಮ ಚಿಕಿತ್ಸೆ ಪಡೆಯುತ್ತಿದ್ದಾರೆ.

Join Whatsapp
Exit mobile version