ಅಲ್ಪಸಂಖ್ಯಾತರಿಗೆ ಪ್ರತಿ ಜಿಲ್ಲೆಯ ಕನಿಷ್ಠ ಒಂದು ಶಾಲೆಯಲ್ಲಿ ಪದವಿ ಪೂರ್ವ ತರಗತಿ ಆರಂಭ: ಸಿಬಿಎಸ್ ಇ ಮಾನ್ಯತೆಗೆ ಕ್ರಮ: ಮುಖ್ಯಮಂತ್ರಿ

Prasthutha|

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ವಿಧಾನಸಭೆಯಲ್ಲಿ ಮಂಡಿಸಿದ ಬಜೆಟ್ ನಲ್ಲಿ ಅಲ್ಪಸಂಖ್ಯಾತರ ಅಭಿವೃದ್ಧಿಗೆ ಹೆಚ್ಚಿನ ಅನುದಾನವನ್ನು ನೀಡದೆ ಮತ್ತೊಮ್ಮೆ ಬಿಜೆಪಿ ಸರ್ಕಾರ ಈ ಸಮುದಾಯವನ್ನು ನಿರ್ಲಕ್ಷಿಸಿದೆ.

- Advertisement -

 ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ 100 ವಿದ್ಯಾರ್ಥಿನಿಲಯಗಳಲ್ಲಿ ತಲಾ 25 ದಾಖಲಾತಿ ಸಂಖ್ಯೆ ಹೆಚ್ಚಿಸಲು 10 ಕೋಟಿ ರೂ.ಗಳ ಅನುದಾನ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಜೆಟ್ ನಲ್ಲಿ ಪ್ರಕಟಿಸಿದ್ದಾರೆ.

ವಿಧಾನಸಭೆಯಲ್ಲಿ ಪ್ರಸಕ್ತ ಸಾಲಿನ ಬಜೆಟ್ ಮಂಡಿಸಿದ ಅವರು, ರಾಜ್ಯದ ವಕ್ಫ್ ಆಸ್ತಿಗಳ ಸಮಗ್ರ ಸಂರಕ್ಷಣೆಗಾಗಿ ಅತ್ಯಾಧುನಿಕ ತಂತ್ರಜ್ಞಾನ ಹಾಗೂ ಡ್ರೋನ್ ಟೆಕ್ನಾಲಜಿಯನ್ನು ಬಳಸಿ ಸಂಪೂರ್ಣ ಸರ್ವೆ ಮಾಡಲಾಗುವುದು. ಈ ಆಸ್ತಿಗಳ ದುರ್ಬಳಕೆಯನ್ನು ತಡೆಯಲು ಸರ್ಕಾರ ಉದ್ದೇಶಿಸಿದೆ ಎಂದರು.

- Advertisement -

ಉರ್ದು ಅಕಾಡೆಮಿ ವತಿಯಿಂದ ರಾಷ್ಟ್ರೀಯ ಭಾಷೆಗಳ ಉತ್ಕೃಷ್ಟ ಸಾಹಿತ್ಯದ ಪುಸ್ತಕಗಳನ್ನು ಉರ್ದು  ಭಾಷೆಗೆ ಅನುವಾದ ಮಾಡುವ ಮತ್ತು ಮುದ್ರಣ ಕಾರ್ಯವನ್ನು ಕೈಗೊಳ್ಳಲಾಗುವುದು.

 ಅಲ್ಪಸಂಖ್ಯಾತರ ಇಲಾಖೆಯಡಿಯಲ್ಲಿನ ಪರವಾನಗಿ ಪಡೆದಿರುವ ಬೀದಿ ಬದಿ ವ್ಯಾಪಾರಿಗಳು, ತಳ್ಳುಗಾಡಿ, ಹೂ ಮಾರಾಟಗಾರರು, ಸಣ್ಣಪುಟ್ಟ ತರಕಾರಿ ಮತ್ತು ಹಣ್ಣು ವ್ಯಾಪಾರಿಗಳಿಗೆ ಹಾಗೂ ಆಟೋ ಚಾಲಕರಿಗೆ ರಾಷ್ಟ್ರೀಯ ಜೀವನೋಪಾಯ ಅಭಿಯಾನದ ಸಹಯೋಗದೊಂದಿಗೆ ಆರ್ಥಿಕ ಸಹಾಯವನ್ನು ಒದಗಿಸಲಾಗುವುದು ಎಂದು ತಿಳಿಸಿದರು.

ಅಲ್ಪಸಂಖ್ಯಾತ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುವ ಕೊಳಚೆ ಪ್ರದೇಶಗಳ ಅಭಿವೃದ್ಧಿಗಾಗಿ ವಿಶೇಷ ಯೋಜನೆ ರೂಪಿಸಲಾಗುವುದು ಎಂದು ತಿಳಿಸಿದ್ದಾರೆ.

ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯಲ್ಲಿನ ವಿವಿಧ ಯೋಜನೆಗಳಡಿಯಲ್ಲಿ ಬಹುವಿಧ ವಸತಿ ಶಾಲೆಗಳನ್ನು ನಡೆಸಲಾಗುತ್ತಿದ್ದು, ಒಂದೇ ಸ್ಥಳದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಾಲೆಗಳನ್ನು ಒಂದು ಗೂಡಿಸಲಾಗುವುದು. ಪ್ರತಿ ಜಿಲ್ಲೆಯ ಕನಿಷ್ಠ ಒಂದು ಶಾಲೆಯಲ್ಲಿ ಪದವಿ ಪೂರ್ವ ತರಗತಿಗಳನ್ನು ಆರಂಭಿಸಲಾಗುವುದು. ಸ್ಮಾರ್ಟ್ ಕ್ಲಾಸ್, ಕಂಪ್ಯೂಟರ್ ಮತ್ತು ವಿಜ್ಞಾನ ಪ್ರಯೋಗಾಲಯಗಳನ್ನು ಒದಗಿಸಿ ಉನ್ನತೀಕರಿಸಲಾಗುವುದು. ಈ ಶಾಲೆಗಳನ್ನು ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆಗಳೆಂದು ಮರು ನಾಮಕರಣ ಮಾಡಿ ಸಿಬಿಎಸ್ ಇ ಮಾನ್ಯತೆ ಪಡೆಯಲು ಕ್ರಮವಹಿಸಲಾಗುವುದು. ಇದಕ್ಕಾಗಿ ಒಟ್ಟಾರೆ 25 ಕೋಟಿ ರೂ.ಗಳ ಹಂಚಿಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಪ್ರಕಟಿಸಿದರು.

Join Whatsapp
Exit mobile version