Home ಟಾಪ್ ಸುದ್ದಿಗಳು ಕಿಟಕಿ ಮುರಿದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಯಲ್ಲಿ ದರೋಡೆ

ಕಿಟಕಿ ಮುರಿದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಯಲ್ಲಿ ದರೋಡೆ

ನ್ಯಾಮತಿ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ ಬಿಐ) ಶಾಖೆಯ ಕಿಟಕಿ ಮುರಿದು ಒಳನುಗ್ಗಿದ ದುಷ್ಕರ್ಮಿಗಳು, ಹಣ ಹಾಗೂ ಚಿನ್ನಾಭರಣ ದರೋಡೆ ಮಾಡಿದ ಘಟನೆ ದಾವಣಗೆರೆಯ ನ್ಯಾಮತಿ ಮುಖ್ಯ ರಸ್ತೆಯಲ್ಲಿ ನಡೆದಿದೆ.


ಕಿಟಕಿಯ ಸರಳುಗಳನ್ನು ಮುರಿದು ನುಗ್ಗಿದ ದರೋಡೆಕೋರರು ಬ್ಯಾಂಕ್ ತಡಕಾಡಿದ್ದಾರೆ. ಲಾಕರ್ ನಲ್ಲಿ ಇಟ್ಟಿದ್ದ ಚಿನ್ನಾಭರಣ ಹಾಗೂ ನಗದು ದೋಚಿದ್ದಾರೆ. ಸಿಸಿಟಿವಿ ಕ್ಯಾಮೆರಾದ ಡಿವಿಆರ್ ಸಮೇತ ಪರಾರಿಯಾಗಿದ್ದಾರೆ. ಬೆಳಿಗ್ಗೆ ಕರ್ತವ್ಯಕ್ಕೆ ಆಗಮಿಸಿದ ಬ್ಯಾಂಕ್ ಸಿಬ್ಬಂದಿ ಇದನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.


ಸಿಪಿಐ ಎನ್.ಎಸ್.ರವಿ ನೇತೃತ್ವದ ಪೊಲೀಸರ ತಂಡ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸುತ್ತಿದೆ. ಕೋಟ್ಯಂತರ ಮೌಲ್ಯದ ಚಿನ್ನಾಭರಣ ದರೋಡೆಯಾಗಿರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಶ್ವಾನ ದಳ ಹಾಗೂ ಬೆರಳಚ್ಚು ತಜ್ಞರ ತಂಡ ಸ್ಥಳಕ್ಕೆ ಭೇಟಿ ನೀಡಲಿದೆ.

Join Whatsapp
Exit mobile version