ಜು.21 ರಂದು ದೆಹಲಿಗೆ ರಾಜ್ಯ ಬಿಜೆಪಿ ನಿಯೋಗ! ಮತ್ತೆ ಗರಿಗೆದರಿತೇ ಭಿನ್ನಮತೀಯ ಚಟುವಟಿಕೆ?

Prasthutha|

ಬೆಂಗಳೂರು: ಲೋಕಸಭಾ ಅಧಿವೇಶನವು ಜು. 19 ರಿಂದ ಪ್ರಾರಂಭವಾಗಲಿದ್ದು, ಈ ಹಿನ್ನೆಲೆಯಲ್ಲಿ 21ರಂದು ಕೆಲವು ಶಾಸಕರು ದೆಹಲಿಗೆ ಹೋಗಬೇಕು ಎಂದು ನಿರ್ಧರಿಸಿದ್ದೇವೆ ಎಂದು ಶಾಸಕ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಹೇಳಿದ್ದಾರೆ.

- Advertisement -

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬದಲಾಯಿಸಬೇಕು ಎಂದು ಹೇಳುವ ಹಕ್ಕು ಯಾರಿಗೂ ಇಲ್ಲ. ಬದಲಾವಣೆ ಮಾಡುವ ಅಧಿಕಾರ ಒಬ್ಬಿಬ್ಬರ ಕೈಯ್ಯಲ್ಲಿಲ್ಲ. ಅಂಥವರು ರಾಜ್ಯದ ಜನರ ಮುಂದೆ ವಿಲನ್ ಆಗುತ್ತಾರೆ ಎಂದು ಎಚ್ಚರಿಸಿದರು.

ಯಡಿಯೂರಪ್ಪ ಸಿಎಂ ಆಗಿ ಎರಡು ವರ್ಷವಾಯಿತು. ಅವರು ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ರಾಷ್ಟ್ರೀಯ ನಾಯಕರ ಸೂಚನೆ ಮೇರೆಗೆ ಉತ್ತಮ ಕೆಲಸ ಮಾಡುತ್ತಿದ್ದಾರೆ. ರೇಣುಕಾಚಾರ್ಯನಂತಹ ಒಬ್ಬಿಬ್ಬರಿಂದ ಯಡಿಯೂರಪ್ಪ ಸಿಎಂ ಆಗಿಲ್ಲ, ಎಲ್ಲ ಶಾಸಕರು ಶಾಸಕಾಂಗ ಸಭೆಯಲ್ಲಿ ಆಯ್ಕೆ ಮಾಡಿದ್ದಾರೆ. ಬೆಂಗಳೂರಿನಲ್ಲಿ ಕುಳಿತು ಅಥವಾ ದೆಹಲಿಯಲ್ಲಿ ಲಾಬಿ ಮಾಡಿದರೆ ಅದೆಲ್ಲ ಆಗುವುದಿಲ್ಲ ಎಂದು ರೇಣುಕಾಚಾರ್ಯ ವಿರೋಧಿ ಬಣದ ಕಾಲೆಳೆದಿದ್ದಾರೆ.

- Advertisement -

ಕೋವಿಡ್ ನಿಂದ ಜನರನ್ನು ರಕ್ಷಣೆ ಮಾಡುವುದೇ ನಮ್ಮ ಜವಾಬ್ದಾರಿ. ವಿನಾಕಾರಣ ರಾಜಕಾರಣ ಮಾಡಬಾರದೆಂದು ವರಿಷ್ಠರು ಹೇಳಿದ್ದಾರೆ. ಏನೇ ಇದ್ದರೂ ನಾಲ್ಕು ಗೋಡೆಯ ಮಧ್ಯೆ ಮಾತನಾಡಬೇಕು ಎಂದು ಹೇಳಿದ್ದಾರೆ.

Join Whatsapp