Home ಟಾಪ್ ಸುದ್ದಿಗಳು ರಾಜ್ಯ ಬಿಜೆಪಿ ಮುಳುಗುತ್ತಿರುವ ಹಡಗಲ್ಲ, ಮುಳುಗಿರುವ ಹಡಗು: ಸಚಿವ ಎಂಬಿ ಪಾಟೀಲ್

ರಾಜ್ಯ ಬಿಜೆಪಿ ಮುಳುಗುತ್ತಿರುವ ಹಡಗಲ್ಲ, ಮುಳುಗಿರುವ ಹಡಗು: ಸಚಿವ ಎಂಬಿ ಪಾಟೀಲ್

ಬೆಂಗಳೂರು: ರಾಜ್ಯ ಬಿಜೆಪಿ ಮುಳುಗುತ್ತಿರುವ ಹಡಗಲ್ಲ, ಮುಳುಗಿರುವ ಹಡಗು ಎಂದು ಸಣ್ಣ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂಬಿ ಪಾಟೀಲ್ ಹೇಳಿದ್ದಾರೆ.

ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು, ತಮ್ಮ ಹಡಗು ಮುಳುಗುತ್ತಿದೆ ಅಂತ ಅವರಿಗೆ ಗೊತ್ತಿದೆ, ಡ್ಯಾಮೇಜ್ ಕಂಟ್ರೋಲ್ ಮಾಡುವುದಕ್ಕೋಸ್ಕರ ಬಿಎಲ್ ಸಂತೋಷ್ ಕಾಂಗ್ರೆಸ್ ಪಕ್ಷದ 45 ಪ್ರಮುಖ ನಾಯಕರು ತನ್ನ ಸಂಪರ್ಕದಲ್ಲಿದ್ದಾರೆ ಅಂತ ಹೇಳುತ್ತಿದ್ದಾರೆ. ರಾಜ್ಯ ಬಿಜೆಪಿ ಮುಳುಗುತ್ತಿರುವ ಹಡಗಲ್ಲ, ಮುಳುಗಿರುವ ಹಡಗು ಎಂದು ಹೇಳಿದರು.

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಕನಿಷ್ಟ 15ರಿಂದ 20 ಸ್ಥಾನ ಗೆಲ್ಲಲಿದೆ. ಬಿಜೆಪಿಯ ಹಲವಾರು ನಾಯಕರು ಕಾಂಗ್ರೆಸ್ ನಾಯಕರೊಂದಿಗೆ ಸಂಪರ್ಕದಲ್ಲಿದ್ದಾರೆ, ಅವರ ಹೆಸರುಗಳನ್ನು ಈಗ ಬಹಿರಂಗಪಡಿಲಾಗದು ಎಂದು ಪಾಟೀಲ್ ಹೇಳಿದರು.

Join Whatsapp
Exit mobile version