ಬೆಂಗಳೂರು: ಫೆಬ್ರವರಿ 16 ರಂದು ರಾಜ್ಯ ಬಜೆಟ್ ಮಂಡನೆಯಾಗಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಬಜೆಟ್ ಮಂಡಿಸಲಿದ್ದಾರೆ.
ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಬ್ರವರಿ 12ರಿಂದ ಫೆಬ್ರವರಿ 23ರವರೆಗೆ ಅಧಿವೇಶನ ನಡೆಸಲು ಮತ್ತು ಫೆಬ್ರವರಿ 16ರಂದು ರಾಜ್ಯ ಬಜೆಟ್ ಮಂಡಿಸಲು ನಿರ್ಧರಿಸಲಾಗಿದೆ.
ವಿಧಾನಮಂಡಲ ಅಧಿವೇಶನ ಅಧಿವೇಶನದ ಮೊದಲ ದಿನ ಅಂದರೆ ಫೆಬ್ರವರಿ 12 ರಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಜಂಟಿ ಸದನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.