Home ಟಾಪ್ ಸುದ್ದಿಗಳು ಬಿಜೆಪಿ ಕಾರ್ಯಕಾರಿಣಿ ಸಭೆಯ ಬಳಿಕ ರಾಜ್ಯ ಸಚಿವ ಸಂಪುಟ ಪುನರ್ ರಚನೆ: ಮುಖ್ಯಮಂತ್ರಿ ಬೊಮ್ಮಾಯಿ

ಬಿಜೆಪಿ ಕಾರ್ಯಕಾರಿಣಿ ಸಭೆಯ ಬಳಿಕ ರಾಜ್ಯ ಸಚಿವ ಸಂಪುಟ ಪುನರ್ ರಚನೆ: ಮುಖ್ಯಮಂತ್ರಿ ಬೊಮ್ಮಾಯಿ

ಬೆಂಗಳೂರು: ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆಯ ಕುರಿತು ಹರಿದಾಡುತ್ತಿದ್ದ ಗುಸು ಗುಸು ಸುದ್ದಿಗೆ ಸದ್ಯ ಬ್ರೇಕ್ ಬಿದ್ದಿದೆ. ಬಿಜೆಪಿ ಕಾರ್ಯಕಾರಿಣಿ ಸಭೆಯ ಬಳಿಕ ರಾಜ್ಯ ಸಚಿವ ಸಂಪುಟ ಪುನರ್ ರಚನೆಯಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಇಂದು ದೆಹಲಿಯಲ್ಲಿ ಮಾತನಾಡಿರುವ ಸಿಎಂ ಸಚಿವ ಸಂಪುಟ ವಿಸ್ತರಣೆಯ ಕುರಿತು ಸ್ಪಷ್ಟನೆ ನೀಡಿದ್ದಾರೆ.

ಈಗಾಗಲೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಬಳಿ ಸಚಿವ ಸಂಪುಟ ಪುನರ್‌ರಚನೆ ಬಗ್ಗೆ ಚರ್ಚೆ ನಡೆಸಿದ್ದು, ಪಕ್ಷದ ವರಿಷ್ಠರು ಮಾಹಿತಿ ಪಡೆದಿದ್ದಾರೆ ಎಂದರು. ಇನ್ನು ಅಮಿತ್ ಶಾ, ಬಿ.ಎಲ್. ಸಂತೋಷ್ ಜೊತೆ ಚರ್ಚೆ ನಡೆಸಿ ನಂತರ ಸಂಪುಟ ಪುನರ್‌ರಚನೆ ಬಗ್ಗೆ ನಿರ್ಧಾರ ಮಾಡುತ್ತೇವೆ ಎಂದಿದ್ದಾರೆ.

ಹೊಸಪೇಟೆಯಲ್ಲಿ ಏಪ್ರಿಲ್ 15 ಮತ್ತು 16ರಂದು ಭಾರತೀಯ ಜನತಾ ಪಕ್ಷದ ಕಾರ್ಯಕಾರಿಣಿ ಸಭೆಯು ನಡೆಯಲಿದ್ದು, ಆ ಬಳಿಕ ಸಚಿವ ಸಂಪುಟ ಪುನರ್ ರಚನೆಯಾಗುವ ಸಾಧ್ಯತೆಯಿದೆ.

Join Whatsapp
Exit mobile version