ನವದೆಹಲಿ: ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಮಧ್ಯೆ ಸಿಎಂ ಕುರ್ಚಿಗಾಗಿ ಫೈಟ್ ನಡೆಯುತ್ತಿದ್ದು, ದೆಹಲಿಯಲ್ಲೇ ಸಿಎಂ ಕುರ್ಚಿ ಕದನ ಜೋರಾಗಿದೆ.
ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರನ್ನು ಕರೆಸಿಕೊಂಡು ಒನ್ ಟು ಒನ್ ಮೀಟಿಂಗ್ ಮಾಡಿದ ಖರ್ಗೆ, ಸಿಎಂ ಕುರ್ಚಿ ಕದನವನ್ನ ಇವತ್ತಿಗೆ ಮುಂದೂಡಿದ್ದಾರೆ.
ನವದೆಹಲಿಯಲ್ಲಿ ಇಂದು(ಮೇ17) ಬೆಳಗ್ಗೆ 11 ಗಂಟೆಗೆ ಫೈನಲ್ ಮೀಟಿಂಗ್ ನಡೆಯಲಿದ್ದು, ರಾಹುಲ್ ಗಾಂಧಿ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಫೈನಲ್ ಮೀಟಿಂಗ್ ನಲ್ಲಿ ಭಾಗಿಯಾಗಲಿದ್ದಾರೆ. ಇಂದಿನ ಸಭೆಯಲ್ಲಿ ಸಿಎಂ ಹೆಸರು ಬಹುತೇಕ ಅಂತಿಮವಾಗುವ ಸಾಧ್ಯತೆಯಿದೆ.