ಕೇಂದ್ರ ಸಚಿವರನ್ನು ಭೇಟಿಯಾದ ರಾಜ್ಯದ ನಿಯೋಗ: ಆಮದು ಅಡಕೆ ಮೇಲೆ ಹೆಚ್ಚಿನ ನಿಯಂತ್ರಣಕ್ಕೆ ಒತ್ತಾಯ

Prasthutha|

ನವದೆಹಲಿ: ಗೃಹ ಸಚಿವರೂ ರಾಜ್ಯ ಅಡಕೆ ಕಾರ್ಯಪಡೆ ಅಧ್ಯಕ್ಷರೂ ಆದ ಆರಗ ಜ್ಞಾನೇಂದ್ರ ಅವರ ನೇತೃತ್ವದ ನಿಯೋಗ,  ಇಂದು ಕೇಂದ್ರ ಪಾರ್ಲಿಮೆಂಟರಿ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರನ್ನು ಭೇಟಿಯಾಗಿ ರಾಜ್ಯ ಅಡಕೆ ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಚರ್ಚಿಸಿತು.

- Advertisement -

ದೇಶಕ್ಕೆ ಆಮದು ಆಗುತ್ತಿರುವ ಅಡಕೆ ಉತ್ಪನ್ನಗಳ ಮೇಲೆ ಹೆಚ್ಚಿನ ನಿಯಂತ್ರಣ ವಿಧಿಸಬೇಕು ಎಂದು ನಿಯೋಗ ಕೇಂದ್ರ ಸಚಿವರಲ್ಲಿ ಮನವಿ ಮಾಡಿತು.

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಜೀವರಾಜ್ ಹಾಗೂ ಬಿಜೆಪಿ ಶಾಸಕ ಹರತಾಳು ಹಾಲಪ್ಪ ಅವರೂ ಉಪಸ್ಥಿತರಿದ್ದರು.



Join Whatsapp