Home ಟಾಪ್ ಸುದ್ದಿಗಳು ರಾಜ್ಯ ಚಲನಚಿತ್ರ ಪ್ರಶಸ್ತಿ ಘೋಷಣೆ: ಪ್ರಜ್ವಲ್ ದೇವರಾಜ್, ಅಕ್ಷತಾ ಅತ್ಯುತ್ತಮ ನಟ-ನಟಿ

ರಾಜ್ಯ ಚಲನಚಿತ್ರ ಪ್ರಶಸ್ತಿ ಘೋಷಣೆ: ಪ್ರಜ್ವಲ್ ದೇವರಾಜ್, ಅಕ್ಷತಾ ಅತ್ಯುತ್ತಮ ನಟ-ನಟಿ

0

ಬೆಂಗಳೂರು: 2020ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟವಾಗಿದ್ದು ಜಂಟಲ್​ಮ್ಯಾನ್ ಚಿತ್ರದ ಅಭಿನಯಕ್ಕಾಗಿ ಪ್ರಜ್ವಲ್ ದೇವರಾಜ್ ಅವರು ಅತ್ಯುತ್ತಮ ನಟ ಪ್ರಶಸ್ತಿ ಪಡೆದಿದ್ದಾರೆ. ಇನ್ನು ಅತ್ಯುತ್ತಮ ನಟಿ ವಿಭಾಗದಲ್ಲಿ ಪಿಂಕಿ ಎಲ್ಲಿ ಚಿತ್ರದಲ್ಲಿ ನಟಿಸಿದ್ದು ಅಕ್ಷತಾ ಪಾಂಡವಪುರ ಆಯ್ಕೆಯಾಗಿದ್ದಾರೆ. ಅತ್ಯುತ್ತಮ ಸಿನಿಮಾ ವಿಭಾಗದಲ್ಲಿ ಪಿಂಕಿ ಎಲ್ಲಿ ಚಿತ್ರ ಆಯ್ಕೆಯಾಗಿದ್ದರೆ, ವರ್ಣಪಟಲ ಚಿತ್ರಕ್ಕೆ 2ನೇ ಅತ್ಯುತ್ತಮ ಸಿನಿಮಾ ಪ್ರಶಸ್ತಿ ಸಿಕ್ಕಿದೆ. ಹರಿವ ನದಿಗೆ ಮೈಯೆಲ್ಲ ಕಾಲು ಚಿತ್ರಕ್ಕೆ ಮೂರನೇ ಅತ್ಯುತ್ತಮ ಚಿತ್ರ ಪ್ರಶಸ್ತಿ ಸಿಕ್ಕಿದೆ.

2020ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪಟ್ಟಿ

  • ಅತ್ಯುತ್ತಮ ನಟ: ಪ್ರಜ್ವಲ್‍ ದೇವರಾಜ್‍ (ಜಂಟಲ್‌ಮನ್)
  • ಅತ್ಯುತ್ತಮ ನಟಿ: ಅಕ್ಷತಾ ಪಾಂಡವಪುರ (ಪಿಂಕಿ ಎಲ್ಲಿ)
  • ಅತ್ಯುತ್ತಮ ಚಿತ್ರ: ಪಿಂಕಿ ಎಲ್ಲಿ
  • 2ನೇ ಅತ್ಯುತ್ತಮ ಚಿತ್ರ: ವರ್ಣಪಟಲ
  • 3ನೇ ಅತ್ಯುತ್ತಮ ಚಿತ್ರ: ಹರಿವ ನದಿಗೆ ಮೈಯೆಲ್ಲಾ ಕಾಲು
  • ವಿಶೇಷ ಸಾಮಾಜಿಕ ಕಾಳಜಿಯ ಚಿತ್ರ: ಗಿಳಿಯು ಪಂಜರದೊಳಿಲ್ಲ ಮತ್ತು ಈ ಮಣ್ಣು
  • ಅತ್ಯುತ್ತಮ ಜನಪ್ರಿಯ ಮನರಂಜನಾ ಚಿತ್ರ: ಫೋರ್ ವಾಲ್ಸ್
  • ಅತ್ಯುತ್ತಮ ಮಕ್ಕಳ ಚಿತ್ರ: ಪದಕ
  • ನಿರ್ದೇಶಕರ ಪ್ರಥಮ ನಿರ್ದೇಶನದ ಅತ್ಯುತ್ತಮ ಚಿತ್ರ: ನೀಲಿ ಹಕ್ಕಿ
    ಅತ್ಯುತ್ತಮ ಕರ್ನಾಟಕ ಪ್ರಾದೇಶಿಕ ಚಿತ್ರ: ಜೀಟಿಗೆ
  • ಅತ್ಯುತ್ತಮ ಸಂಗೀತ ನಿರ್ದೇಶಕ: ಗಗನ್‍ ಬಡೇರಿಯಾ
  • ಅತ್ಯುತ್ತಮ ಸಂಕಲನ: ನಾಗೇಂದ್ರ
  • ಅತ್ಯುತ್ತಮ ಪೋಷಕ ನಟ: ರಮೇಶ್‍ ಪಂಡಿತ್‍
  • ಅತ್ಯುತ್ತಮ ಪೋಷಕ ನಟಿ: ಮಂಜುಳಮ್ಮ
  • ಅತ್ಯುತ್ತಮ ಕಥೆ: ಶಶಿಕಾಂತ್‍ ಗಟ್ಟಿ
  • ಅತ್ಯುತ್ತಮ ಚಿತ್ರಕಥೆ: ರಾಘವೇಂದ್ರ ಕುಮಾರ್‍
  • ಅತ್ಯುತ್ತಮ ಸಂಭಾಷಣೆ: ವೀರಪ್ಪ ಮರಳವಾಡಿ
  • ಅತ್ಯುತ್ತಮ ಛಾಯಾಗ್ರಹಣ: ಅಶೋಕ್ ಕಶ್ಯಪ್‍

NO COMMENTS

LEAVE A REPLY

Please enter your comment!
Please enter your name here

Exit mobile version