Home ಟಾಪ್ ಸುದ್ದಿಗಳು PFI ನಿಷೇಧ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆ: ರಾಜ್ಯ ಸರ್ಕಾರದ ಪರ ವಕೀಲರ ನೇಮಕ

PFI ನಿಷೇಧ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆ: ರಾಜ್ಯ ಸರ್ಕಾರದ ಪರ ವಕೀಲರ ನೇಮಕ

ಬೆಂಗಳೂರು: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ನಿಷೇಧ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆ ನಡೆಸಲಿರುವ ನ್ಯಾಯಾಧೀಕರಣದ ಮುಂದೆ ಕರ್ನಾಟಕ ಸರ್ಕಾರದ ಪರ ವಾದ ಮಂಡಿಸಲು ಪಿ.ಪ್ರಸನ್ನಕುಮಾರ್ ಅವರನ್ನು ವಿಶೇಷ ವಕೀಲರನ್ನಾಗಿ ನೇಮಕ ಮಾಡಿ ಗೃಹ ಇಲಾಖೆಯ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.


ಈಗಾಗಲೇ ಸಿಬಿಐ, ಇಡಿ ಸೇರಿದಂತೆ ಹಲವು ಕೇಂದ್ರ ಸರ್ಕಾರಿ ಸಂಸ್ಥೆಗಳಿಗೆ ವಕೀಲರಾಗಿ ಸೇವೆ ಸಲ್ಲಿಸುತ್ತಿರುವ ಪ್ರಸನ್ನಕುಮಾರ್, ಕರ್ನಾಟಕ ಸರ್ಕಾರದ ಪರ ವಾದ ಮಂಡಿಸುವರು. ಎಎಸ್’ಜಿ ಎಸ್.ವಿ.ರಾಜು ಕೇಂದ್ರ ಸರ್ಕಾರದ ಪರವಾದ ಮಂಡಿಸಲಿದ್ದಾರೆ ಎಂದು ತಿಳಿದುಬಂದಿದೆ.

Join Whatsapp
Exit mobile version