Home ಟಾಪ್ ಸುದ್ದಿಗಳು ಮಹಿಳಾ ಉದ್ಯಮಿಗಳಿಗೆ ಪ್ರತ್ಯೇಕ ಆರ್ಥಿಕ ಸಂಸ್ಥೆ ರಚನೆಗೆ ರಾಜ್ಯ ಸರ್ಕಾರ ಚಿಂತನೆ

ಮಹಿಳಾ ಉದ್ಯಮಿಗಳಿಗೆ ಪ್ರತ್ಯೇಕ ಆರ್ಥಿಕ ಸಂಸ್ಥೆ ರಚನೆಗೆ ರಾಜ್ಯ ಸರ್ಕಾರ ಚಿಂತನೆ

ಬೆಂಗಳೂರು: ಮಹಿಳಾ ಉದ್ಯಮಿಗಳಿಗೆ ಪ್ರತ್ಯೇಕ ಆರ್ಥಿಕ ಸಂಸ್ಥೆ ರಚನೆಗೆ ರಾಜ್ಯ ಸರ್ಕಾರ ಮುಂದಾಗಿದೆ.


ಮಹಿಳಾ ಉದ್ಯಮಿಗಳ ಸಂಘದ ವತಿಯಿಂದ ಆಯೋಜಿಸಿದ್ದ ಅಂತರಾಷ್ಟ್ರೀಯ ಮಹಿಳಾ ಉದ್ಯಮಿಗಳ ದಿನಾಚರಣೆಯ ಅಂಗವಾಗಿ ‘ಒಗ್ಗಟ್ಟಾಗಿ ಬೆಳೆಯೋಣ’ ಕಾರ್ಯಕ್ರಮವನ್ನು ಉದ್ಘಾಟಿಸಿದ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಗ್ರಾಮಗಳ ಸ್ತ್ರೀಶಕ್ತಿ ಸಂಘಗಳಿಂದ ಹಿಡಿದು ಬೃಹತ್ ಮಟ್ಟದ ಉದ್ಯಮಗಳಿಗಾಗಿಯೇ ಉತ್ತಮ ಆರ್ಥಿಕ ವ್ಯವಸ್ಥೆ ಕಲ್ಪಿಸಲು ಪ್ರತ್ಯೇಕ ಆರ್ಥಿಕ ಸಂಸ್ಥೆಯನ್ನು ರಚಿಸುವ ಕುರಿತು ಸರ್ಕಾರ ಚಿಂತನೆ ನಡೆಸಿದೆ ಎಂದು ಹೇಳಿದ್ದಾರೆ.

ಮಹಿಳೆಯರು ಉದ್ಯಮದಲ್ಲಿ ತೊಡಗಿಕೊಳ್ಳಬೇಕು. ಆದ್ದರಿಂದ ಸರ್ಕಾರ ಪ್ರತ್ಯೇಕ ಸಂಸ್ಥೆ ಸ್ಥಾಪಿಸುವ ಚಿಂತನೆ ನಡೆಸಿದೆ. ಅಂಧ ಮಹಿಳೆಯರಿಗೆ ವಿಶೇಷ ಕಾರ್ಯಕ್ರಮವನ್ನು ಒಂದು ವಾರದೊಳಗೆ ರೂಪಿಸಿ ಉದ್ಯೋಗ ಪಡೆಯುವಂತೆ ಅನುಕೂಲ ಕಲ್ಪಿಸಲಾಗುವುದು ಎಂದು ಅವರು ತಿಳಿಸಿದರು.

Join Whatsapp
Exit mobile version