ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ ಎಸ್ ಷಡಕ್ಷರಿ ಎತ್ತಂಗಡಿ

Prasthutha|

ಶಿವಮೊಗ್ಗ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ಅವರನ್ನು ವರ್ಗಾವಣೆ ಮಾಡಲಾಗಿದೆ.

- Advertisement -


ಷಡಕ್ಷರಿ ವಿರುದ್ಧ ಅಧಿಕಾರ ದುರ್ಬಳಕೆ ಆರೋಪ ಕೇಳಿಬಂದ ಹಿನ್ನೆಲೆ ಶಿವಮೊಗ್ಗ ಲೆಕ್ಕಾಧೀಕ್ಷಕರ ಹುದ್ದೆಯಿಂದ ಕೋಲಾರ ಸಮಾಜ ಕಲ್ಯಾಣ ಇಲಾಖೆ ಲೆಕ್ಕಾಧೀಕ್ಷಕರ ಹುದ್ದೆಗೆ ಎತ್ತಂಗಡಿ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.


ರಾಯಲ್ಟಿ ಪಾವತಿಸದೆ ಶಿವಮೊಗ್ಗದ ಅಬ್ಬಲಗೆರೆ ಕೆರೆಯಿಂದ ಅಕ್ರಮವಾಗಿ ಮಣ್ಣು ಸಾಗಿಸಿ ಸರ್ಕಾರದ ಖಜಾನೆಗೆ 71,45,920 ರೂ. ನಷ್ಟ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಕಾರ್ಯಪಾಲಕ ಇಂಜಿನಿಯರ್ ವರದಿ ನೀಡಿದ್ದರು. ಅದರಂತೆ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು ಸಿ.ಎಸ್.ಷಡಕ್ಷರಿಯವರನ್ನು ಕುಡಲೇ ವರ್ಗಾವಣೆ ಮಾಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರ ಬರೆದಿದ್ದರು.

Join Whatsapp