ಮೊಹರಂ, ಗೌರಿ ಗಣೇಶ ಹಬ್ಬ ಇತರೆ ಧಾರ್ಮಿಕ ಸಮಾರಂಭಗಳಿಗೆ ನಿರ್ಬಂಧ ವಿಧಿಸಿ ಆದೇಶ ಪ್ರಕಟಿಸಿದ ರಾಜ್ಯ ಸರ್ಕಾರ

Prasthutha|

ಬೆಂಗಳೂರು: ಗೌರಿ ಗಣೇಶ ಹಬ್ಬ, ಕೃಷ್ಣಾ ಜನ್ಮಾಷ್ಟಮಿ,ಶ್ರಾವಣ, ಮೊಹರಂ,ಇತರೆ ಧಾರ್ಮಿಕ, ಸಾಮಾಜಿಕ ಸಭೆ, ಸಮಾರಂಭಗಳು ,ಮೆರವಣಿಗೆ, ಪೂಜೆ ಪ್ರಾರ್ಥನೆಗಳಿಗೆ ಕೋವಿಡ್ ಹಿನ್ನೆಲೆಯಲ್ಲಿ ನಿರ್ಬಂಧ ವಿಧಿಸಿ ಸರ್ಕಾರ ಆದೇಶ ಹೊರಡಿಸಿದೆ.

- Advertisement -

ಮೊಹರಂ ಪ್ರಾರ್ಥನಾ ಸಭೆ, ಮೆರವಣಿಗೆಗೆ ನಿಷೇಧಿಸಲಾಗಿದೆ. ಸೂಕ್ತ ದೈಹಿಕ ಅಂತರ ಪಾಲಿಸಿ ಕನಿಷ್ಠ ಸಂಖ್ಯೆಯಲ್ಲಿ ಭಾಗಿಯಾಗಬಹುದಾಗಿದೆ. ಆಲಂ / ಪಂಜಾ, ತಾಜಿಯತ್ ಗಳನ್ನು ಜನರು ಮುಟ್ಟುವಂತಿಲ್ಲ. ಪ್ರಾರ್ಥನಾ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ. ಮನೆಯಲ್ಲೇ ಪ್ರಾರ್ಥನೆ ಸಲ್ಲಿಸುವಂತೆ 10 ವರ್ಷದೊಳಗಿನವರು, 60 ವರ್ಷ ಮೇಲ್ಪಟ್ಟವರು ಸೂಚನೆ ನೀಡಲಾಗಿದೆ. ಪ್ರಾರ್ಥನೆ ವೇಳೆ ಕನಿಷ್ಠ 6 ಅಡಿ ದೈಹಿಕ ಅಂತರ ಕಡ್ಡಾಯವಾಗಿ ಪಾಲಿಸಬೇಕು ಎಂದು ರಾಜ್ಯ ಸರ್ಕಾರ ಪ್ರಕಟಿಸಿರುವ ನಿಯಮಾವಳಿಯಲ್ಲಿ ಸೂಚಿಸಲಾಗಿದೆ.

ಇನ್ನು ಗಣೇಶ ಮೂರ್ತಿ ತರುವಾಗ ಮತ್ತು ವಿಸರ್ಜನೆ ವೇಳೆ ಮೆರವಣಿಗೆಯನ್ನು ನಿಷೇಧಿಸಲಾಗಿದೆ. ಗಣೇಶ ಹಬ್ಬ ಆಚರಿಸುವ ದೇಗುಲಗಳಲ್ಲಿ ನಿತ್ಯ ಸ್ಯಾನಿಟೈಸೇಷನ್ ನಡೆಸಬೇಕು. ದೇಗುಲಗಳಲ್ಲಿ ಭಕ್ತರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ದೇಗುಲಗಳಲ್ಲಿ ಭಕ್ತರಿಗೆ ಕನಿಷ್ಠ 6 ಅಡಿ ದೈಹಿಕ ಅಂತರ ಕಡ್ಡಾಯವಾಗಿ ಪಾಲಿಸಬೇಕು. ಹೊರಾಂಗಣದಲ್ಲಿ ಚಪ್ಪರ, ಪೆಂಡಾಲ್, ಶಾಮಿಯಾನದ ವೇದಿಕೆ ನಿರ್ಮಿಸುವಂತಿಲ್ಲ. ವಿಸರ್ಜನೆ ವೇಳೆ ಮನರಂಜನೆ ಕಾರ್ಯಕ್ರಮ ನಡೆಸುವಂತಿಲ್ಲ ಎಂದು ರಾಜ್ಯ ಸರ್ಕಾರ ಆದೇಶ ಪ್ರಕಟಿಸಿದೆ.

- Advertisement -

Join Whatsapp