ಬೆಂಗಳೂರು: ಕೊರೊನಾ ವೈರಸ್ ನ ಜೆಎನ್1 ರೂಪಾಂತರಿಯಿಂದಾಗಿ ಕೋವಿಡ್-19 ಸೋಂಕು ಹರಡುವಿಕೆ ತೀವ್ರಗೊಳ್ಳುವ ಸಾಧ್ಯತೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮಂಗಳವಾರ ಮಾರ್ಗಸೂಚಿ ಬಿಡುಗಡೆ ಮಾಡಿದೆ.
ಕೇರಳ ಹಾಗೂ ತಮಿಳುನಾಡು ರಾಜ್ಯಕ್ಕೆ ಹೊಂದಿಕೊಂಡ ಗಡಿ ಭಾಗದಲ್ಲಿ ತಪಾಸಣೆ ಹೆಚ್ಚಳ ಮಾಡಲು ಮಾರ್ಗಸೂಚಿಯಲ್ಲಿ ಉಲ್ಲೇಖಿಸಲಾಗಿದೆ.
ಕೋವಿಡ್ ಮಾರ್ಗಸೂಚಿಯಲ್ಲೇನೇನಿದೆ?
• ಕೇರಳ, ತಮಿಳುನಾಡು ರಾಜ್ಯಗಳ ಗಡಿ ಭಾಗದಲ್ಲಿ ತಪಾಸಣೆ ಹೆಚ್ಚಳ
ಎಲ್ಲಾ ಹಿರಿಯ ನಾಗರೀಕರು (60 ವರ್ಷ ಹಾಗೂ ಮೇಲ್ಪಟ್ಟವರು), ಇತರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರು ( ವಿಶೇಷವಾಗಿ ಕಿಡ್ನಿ, ಹೃದಯ, ಲಿವರ್ ಸಮಸ್ಯೆಗಳು), ಗರ್ಭಿಣಿಯರು, ಎದೆ ಹಾಲುಣಿಸುವ ತಾಯಂದಿರು, ಹೊರಾಂಗಣ ಪ್ರದೇಶಗಳಿಗೆ ತೆರಳುವಾಗ ಮಾಸ್ಕ್ ಧರಿಸಬೇಕು.
- ಅಗತ್ಯ ಗಾಳಿ-ಬೆಳಕಿನ ವ್ಯವಸ್ಥೆಯಿಲ್ಲದ ಮತ್ತು ಹೆಚ್ಚು ಜನಸಂದಣಿಯಿರುವ ಪ್ರದೇಶಗಳಿಗೆ ತೆರಳದಿರುವುದು ಸೂಕ್ತ.
- ಜ್ವರ, ಕೆಮ್ಮು, ನೆಗಡಿ, ಇತ್ಯಾದಿ ಉಸಿರಾಟದ ಸೋಂಕಿನ ಲಕ್ಷಣಗಳನ್ನು ಹೊಂದಿದವರು ತಕ್ಷಣವೇ ಅಗತ್ಯ ವೈದ್ಯಕೀಯ ಸಲಹೆಯನ್ನು ಪಡೆಯಬೇಕು.
- ಮೂಗು ಹಾಗೂ ಬಾಯಿ ಮುಚ್ಚುವಂತೆ ಮಾಸ್ಕ್ ಧರಿಸುವುದು, ಅಗತ್ಯ ಗಾಳಿ-ಬೆಳಕಿನ ವ್ಯವಸ್ಥೆಯಿಲ್ಲದ ಮತ್ತು ಹೆಚ್ಚು ಜನಸಂದಣಿಯಿರುವ ಪ್ರದೇಶಗಳಿಗೆ ಭೇಟಿ ನೀಡದಿರುವುದು ಸೂಕ್ತವಾಗಿದೆ
- ಉತ್ತಮ ವೈಯಕ್ತಿಕ ಸ್ವಚ್ಛತೆ, ಆಗಾಗ್ಗೆ ಕೈಗಳನ್ನು ಸೋಪು ಹಾಗೂ ನೀರಿನಿಂದ ತೊಳೆದುಕೊಳ್ಳುವುದು, ಇತ್ಯಾದಿಗಳ ಪಾಲನೆಯು ಅಗತ್ಯವಾಗಿದೆ
- ಆರೋಗ್ಯ ಸಮಸ್ಯೆಗಳು ಕಂಡುಬಂದಲ್ಲಿ, ಮನೆಯಲ್ಲಿರುವುದು ಸೂಕ್ತ. ಇತರ ವ್ಯಕ್ತಿಗಳೊಂದಿಗೆ, ವಿಶೇಷವಾಗಿ ಹಿರಿಯ ನಾಗರೀಕರು / ದುರ್ಬಲರನ್ನು (vulnerable) ಅವಶ್ಯವಿದ್ದಲ್ಲಿ, ಮಾತ್ರವೇ ಭೇಟಿ ಮಾಡುವುದು.
- ಆರೋಗ್ಯ ಸಮಸ್ಯೆಗಳನ್ನು ಹೊಂದಿದವರು, ಜನಸಂದಣಿಯ ಪ್ರದೇಶಗಳಿಗೆ ಭೇಟಿ ನೀಡಬೇಕಾದ ಸಂದರ್ಭದಲ್ಲಿ ಮಾಸ್ಕ್ ಧರಿಸುವಂತೆ ಸಲಹೆ
- ಅಂತರ ರಾಷ್ಟ್ರೀಯ ಪ್ರಯಾಣದ ಸಂದರ್ಭದಲ್ಲಿ ಎಚ್ಚರಿಕೆಯಿಂದಿದ್ದು, ವಿಮಾನ ನಿಲ್ದಾಣದಲ್ಲಿ ಹಾಗೂ ವಿಮಾನದ ಒಳಗೆ ಮಾಸ್ ಧರಿಸುವುದು ಹೆಚ್ಚಿನ ಗಾಳಿ-ಬೆಳಕು ಇಲ್ಲವ ಮತ್ತು ಜನದಟ್ಟಣೆ ಇರುವ ಸ್ಥಳಗಳಿಗೆ ತೆರಳದಿರುವುದೂ ಸೇರಿದಂತೆ ಇತರ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಪಾಲಿಸುವುದು ಸೂಕ್ತವಾಗಿದೆ.