ಎಲ್ಲಾ ಶಾಲೆಗಳಲ್ಲಿ ರಾಷ್ಟ್ರಗೀತೆ ಹಾಡಲು ಆದೇಶ ಹೊರಡಿಸಿದ ರಾಜ್ಯ ಸರ್ಕಾರ

Prasthutha|

ಬೆಂಗಳೂರು: ರಾಜ್ಯದ ಎಲ್ಲಾ ಶಾಲೆಗಳಲ್ಲಿ ಇನ್ಮುಂದೆ ಕಡ್ಡಾಯವಾಗಿ ರಾಷ್ಟ್ರಗೀತೆ ಹಾಡುವಂತೆ ಸರಕಾರ ಆದೇಶ ಹೊರಡಿಸಿದೆ.

- Advertisement -

ಬೆಂಗಳೂರಿನ ಕೆಲವು ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ವಿದ್ಯಾರ್ಥಿಗಳಿಂದ ಪ್ರತಿದಿನ  ರಾಷ್ಟ್ರಗೀತೆಯನ್ನು ಹಾಡಿಸುತ್ತಿಲ್ಲ ಎಂದು ದೂರು ಬಂದಿದ್ದು , ಈ ಹಿನ್ನೆಲೆಯಲ್ಲಿ ಈ ಆದೇಶ ಹೊರಡಿಸಲಾಗಿದೆ.

- Advertisement -

ಶಾಲೆಗಳಲ್ಲಿ ಪ್ರತಿದಿನ ಮುಂಜಾನೆ ನಡೆಯುವ ಸಾಮೂಹಿಕ ಪ್ರಾರ್ಥನೆಯ ವೇಳೆ ವಿದ್ಯಾರ್ಥಿಗಳಿಂದ ರಾಷ್ಟ್ರಗೀತೆಯನ್ನು ಸಾಮೂಹಿಕವಾಗಿ ಹಾಡಿಸುವುದು ರೂಡಿ ಮಾಡಬೇಕು. ಆ ಮೂಲಕ ವಿದ್ಯಾರ್ಥಿಗಳಲ್ಲಿ ರಾಷ್ಟ್ರಾಭಿಮಾನ ಹಾಗೂ ರಾಷ್ಟ್ರದ ಬಗ್ಗೆ ಗೌರವದ ಭಾವನೆಗಳನ್ನು ಮೂಡಿಸಬೇಕು ಎಂದು ಸರಕಾರ ಹೊರಡಿಸಿದ ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಈ ಬಗ್ಗೆ ಶಾಲೆಗೆ ಭೇಟಿ ನೀಡಿ ಆದೇಶದ ಪಾಲನೆ ಬಗ್ಗೆ ಖಾತ್ರಿಪಡಿಸಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ.



Join Whatsapp