ವಿದ್ಯುತ್ ದರ ಇಳಿಕೆ ಮಾಡಿ ರಾಜ್ಯ ಸರ್ಕಾರ ಆದೇಶ

Prasthutha|

ಬೆಂಗಳೂರು: ಹೊಸ ದರ ಪರಿಷ್ಕರಣೆ ಮಾಡಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು (KERC) ವಿದ್ಯುತ್ ದರ ಇಳಿಕೆ ಮಾಡಿ ಬುಧವಾರ ಆದೇಶ ಹೊರಡಿಸಿದೆ.

- Advertisement -


ಆ ಮೂಲಕ ರಾಜ್ಯದ ವಿದ್ಯುತ್ ಬಳಕೆದಾರರಿಗೆ ಗುಡ್ ನ್ಯೂಸ್ ನೀಡಿದೆ.


100 ಯೂನಿಟ್ ಗಿಂತ ಹೆಚ್ಚು ಬಳಸುವವರಿಗೆ ಪ್ರತಿ ಯೂನಿಟ್ ಮೇಲೆ 1 ರೂಪಾಯಿ 10 ಪೈಸೆ ಇಳಿಕೆ ಮಾಡಲಾಗಿದೆ. ಅದೇ ರೀತಿಯಾಗಿ ವಾಣಿಜ್ಯ ಬಳಕೆದಾರರಿಗೆ 1 ರೂಪಾಯಿ 25 ಪೈಸೆ ದರ ಇಳಿಕೆ ಮಾಡಲಾಗಿದೆ. ಆಸ್ಪತ್ರೆ ಮತ್ತು ಶಿಕ್ಷಣ ಸಂಸ್ಥೆಗಳಿಗೆ ಯೂನಿಟ್ ಗೆ 40 ಪೈಸೆ ಕಡಿತ ಮಾಡಲಾಗಿದ್ದು, ಖಾಸಗಿ ಏತ ನೀರಾವರಿ ಬಳಕೆದಾರರಿಗೆ 2 ರೂಪಾಯಿ ಇಳಿಕೆ ಮಾಡಲಾಗಿದೆ. 100 ಯೂನಿಟ್ ಗಿಂತ ಹೆಚ್ಚು ಬಳಸುವವರಿಗೆ ಮಾತ್ರ ಹೊಸ ದರ ಮಾರ್ಚ್ 1ರಿಂದಲೇ ಅನ್ವಯವಾಗಲಿದೆ.

Join Whatsapp