RSS ಅಂಗಸಂಸ್ಥೆಗೆ ಜಮೀನು ಹಸ್ತಾಂತರಕ್ಕೆ ರಾಜ್ಯ ಸರಕಾರ ತಡೆ

Prasthutha|

ಬೆಂಗಳೂರು: ಬೆಂಗಳೂರು ದಕ್ಷಿಣ ತಾಲೂಕಿನ ತಾವರೆಕೆರೆ ಹೋಬಳಿಯ ಕುರುಬರಹಳ್ಳಿಯಲ್ಲಿ ಮೀಸಲಿರಿಸಿದ್ದ 40 ಎಕರೆ ವಿಸ್ತೀರ್ಣದ ಗೋಮಾಳ ಜಮೀನಿನ ಪೈಕಿ 35.33 ಎಕರೆ ಜಮೀನನ್ನು ಆರೆಸ್ಸೆಸ್ ಅಂಗ ಸಂಸ್ಥೆ ಜನಸೇವಾ ಟ್ರಸ್ಟ್ ಗೆ ಹಿಂದಿನ ಬಿಜೆಪಿ ಸರಕಾರ ಮಂಜೂರು ಮಾಡಿದ್ದ ಕ್ರಮಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರ ತಡೆ ನೀಡಿದೆ.

- Advertisement -


ಈ ಬಗ್ಗೆ ಇಂದು (ಜುಲೈ 14) ಸದನದಲ್ಲಿ ಬಿಜೆಪಿ ಶಾಸಕ ಎಸ್.ಟಿ ಸೋಮಶೇಖರ್ ಕೇಳಿದ ಪ್ರಶ್ನೆಗೆ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ಲಿಖಿತ ಉತ್ತರ ನೀಡಿದರು. ಕಳೆದ ಮೂರು ವರ್ಷಗಳಲ್ಲಿ ಬೆಂಗಳೂರು ದಕ್ಷಿಣ ತಾಲೂಕಿನಲ್ಲಿ ಎಷ್ಟು ಸರ್ಕಾರಿ ಜಮೀನನ್ನು ಸಂಘ-ಸಂಸ್ಥೆಗಳಿಗೆ ಇಲಾಖೆಗಳಿಗೆ ಮತ್ತು ವಿವಿಧ ಉದ್ದೇಶಗಳಿಗೆ ನೀಡಲಾಗಿದೆ ಎಂದು ಸೋಮಶೇಖರ್ ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಕೃಷ್ಣ ಬೈರೇಗೌಡ, ಜನಸೇವಾ ಟ್ರಸ್ಟ್ಗೆ ನೀಡಲಾಗಿದ್ದ 35 ಎಕರೆ 33 ಗುಂಟೆ ಭೂಮಿಯನ್ನು ತಡೆಹಿಡಿಯಲಾಗಿದೆ ಎಂದು ಮಾಹಿತಿ ನೀಡಿದರು.

ಕಾಂಗ್ರೆಸ್ ಸರ್ಕಾರ ಬಂದ ಒಂದೇ ವಾರಕ್ಕೆ ಭೂಮಿ ಹಸ್ತಾಂತರಕ್ಕೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದರು. ಅಲ್ಲದೇ ಇದೀಗ ಬಿಜೆಪಿಯ ಮಂಜೂರಾತಿಗೆ ಕಾಂಗ್ರೆಸ್ ಸರ್ಕಾರ ತಡೆ ಹಿಡಿದಿದ್ದು, ಇದೀಗ ಈ ಬಗ್ಗೆ ವಿಧಾನಸಭೆಯಲ್ಲಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ಲಿಖಿತ ಮಾಹಿತಿ ನೀಡುವ ಮೂಲಕ ಸ್ಪಷ್ಟಪಡಿಸಿದ್ದಾರೆ.



Join Whatsapp