Home ಟಾಪ್ ಸುದ್ದಿಗಳು ಮುಸ್ಲಿಂ ವಿದ್ಯಾರ್ಥಿಗಳ ‘ಮಾಹಿತಿ’ ಸಂಗ್ರಹಿಸುತ್ತಿರುವ ರಾಜ್ಯ ಸರಕಾರ

ಮುಸ್ಲಿಂ ವಿದ್ಯಾರ್ಥಿಗಳ ‘ಮಾಹಿತಿ’ ಸಂಗ್ರಹಿಸುತ್ತಿರುವ ರಾಜ್ಯ ಸರಕಾರ

ಬೆಂಗಳೂರು: ಹಿಜಾಬ್ ವಿರುದ್ಧ ಹೈಕೋರ್ಟ್ ನೀಡಿರುವ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ ಗೆ ಮೊರೆ ಹೋಗಿರುವ ಬೆನ್ನಲ್ಲೇ ರಾಜ್ಯ ಸರಕಾರವು ಮುಸ್ಲಿಮ್ ವಿದ್ಯಾರ್ಥಿಗಳ ಮಾಹಿತಿಗಳನ್ನು ಸಂಗ್ರಹಿಸಲು ಮುಂದಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾ ಖೆಯ ಉನ್ನತ ಮೂಲಗಳು ಮಾಧ್ಯಮಗಳಿಗೆ ಖಚಿತ ಮಾಹಿತಿ ನೀಡಿವೆ.

ರಾಜ್ಯದ ಸರಕಾರಿ, ಅನುದಾನಿತ ಮತ್ತು ಅನುದಾನರಹಿತ ಕಾಲೇಜುಗಳಲ್ಲಿನ ಒಟ್ಟು ವಿದ್ಯಾರ್ಥಿಗಳ ಸಂಖ್ಯೆಯ ಬಗ್ಗೆ ಮಾಹಿತಿ ಸಂಗ್ರಹಿಸುವುದರೊಂದಿಗೆ ಮುಸ್ಲಿಮ್ ವಿದ್ಯಾರ್ಥಿಗಳ ಅಂಕಿ ಅಂಶಗಳನ್ನೂ ಸಂಗ್ರಹಿಸಲಿದ್ದು,  ವಿಶೇಷತಃ ಉಡುಪಿ, ಕುಂದಾಪುರದ  ಒಟ್ಟು ವಿದ್ಯಾರ್ಥಿಗಳು ಮತ್ತು ಮುಸ್ಲಿಮ್ ವಿದ್ಯಾರ್ಥಿಗಳ ಸಂಖ್ಯೆಯನ್ನುಆದಷ್ಟು ಬೇಗ ಸಂಗ್ರಹಿಸಲು ಸೂಚಿಸಿದೆ ಎಂದು ತಿಳಿದು ಬಂದಿದೆ.

ಹಿಜಾಬ್ ವಿರುದ್ಧ ತೀರ್ಪು ನೀಡಿದ್ದ ಹೈಕೋರ್ಟ್‌ನ ಆದೇಶವನ್ನುಪ್ರಶ್ನಿಸಿ ಸಲ್ಲಿಸಲಾಗಿರುವ ಮೇಲ್ಮನವಿ ಅರ್ಜಿಯನ್ನು ಹೋಳಿ ಹಬ್ಬದ ನಂತರ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಒಪ್ಪಿಕೊಂಡಿದೆ.

Join Whatsapp
Exit mobile version