Home ಟಾಪ್ ಸುದ್ದಿಗಳು ರಾಜ್ಯ ಸರ್ಕಾರ ಹಣಕಾಸು ನಿರ್ವಹಣೆಯಲ್ಲಿ ಎಡವಿದೆ: ಬೊಮ್ಮಾಯಿ ಕಿಡಿ

ರಾಜ್ಯ ಸರ್ಕಾರ ಹಣಕಾಸು ನಿರ್ವಹಣೆಯಲ್ಲಿ ಎಡವಿದೆ: ಬೊಮ್ಮಾಯಿ ಕಿಡಿ

ಹುಬ್ಬಳ್ಳಿ : ರಾಜ್ಯ ಸರ್ಕಾರ ಹಣಕಾಸು ನಿರ್ವಹಣೆಯಲ್ಲಿ ಎಡವಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 6 ತಿಂಗಳ ಆಡಳಿತದ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟೀಕಾಪ್ರಹಾರ ನಡೆಸಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಸರ್ಕಾರ ಇದೆ ಎಂದು ಯಾರಿಗೂ ಅನಿಸುತ್ತಿಲ್ಲ. ನಮ್ಮ ಅವಧಿಯಲ್ಲಿ ಅನುಷ್ಠಾನಗೊಂಡ ಯೋಜನೆಗಳಿಗೆ ಹಣ ಬಿಡುಗಡೆ ಮಾಡಬೇಡಿ ಎಂದು ಅಧಿಕಾರಿಗಳಿಗೆ ಮೌಖಿಕ ಆದೇಶ ನೀಡಲಾಗಿದೆ. ರಾಜ್ಯದ ಪ್ರಗತಿ ಶೂನ್ಯವಾಗಿದೆ ಎಂದು ಆರೋಪಿಸಿದರು. ಪ್ರತಿ ವರ್ಷ ಬಂಡವಾಳ ವೆಚ್ಚ ಏರಿಕೆಯಾಗಬೇಕು. ಆದರೆ, ಅಧಿವೇಶನದಲ್ಲಿ ಮಂಡಿಸಿದ ಮಧ್ಯಂತರ ಹಣಕಾಸು ವರದಿಯಲ್ಲಿ ಬಂಡವಾಳ ವೆಚ್ಚ ಕಳೆದ ಐದು ವರ್ಷಗಳಲ್ಲಿ ಕಡಿಮೆಯಾಗಿರುವುದು ರಾಜ್ಯ ಹಣಕಾಸು ಸ್ಥಿತಿಗೆ ಹಿಡಿದ ಕನ್ನಡಿ ಎಂದು ಹೇಳಿದರು. ಕೃಷ್ಣಾ ಹಂತ 3 ಯೋಜನೆ ಸೇರಿ ಬಜೆಟ್ನಲ್ಲಿ ಘೋಷಿಸಿದ ಉತ್ತರ ಕರ್ನಾಟಕದ ವಿವಿಧ ಯೋಜನೆಗಳಿಗೆ ಹಣ ಬಿಡುಗಡೆಯಾಗುತ್ತಿಲ್ಲ. ನಾವು ಅಧಿಕಾರದಲ್ಲಿದ್ದಾಗ ಉತ್ತರ ಕರ್ನಾಟಕ ನೀರಾವರಿ ಯೋಜನೆಗಳಿಗೆ 22 ಸಾವಿರ ಕೋಟಿ ರೂ. ಅನುದಾನವನ್ನು ಕೊಟ್ಟಿದ್ದೆವು ಎಂದರು.

Join Whatsapp
Exit mobile version