Home ಟಾಪ್ ಸುದ್ದಿಗಳು ಗಾಲಿ ಜನಾರ್ದನ ರೆಡ್ಡಿ ಆಸ್ತಿ ಜಪ್ತಿಗೆ ರಾಜ್ಯ ಸರ್ಕಾರದಿಂದ ಗ್ರೀನ್ ಸಿಗ್ನಲ್

ಗಾಲಿ ಜನಾರ್ದನ ರೆಡ್ಡಿ ಆಸ್ತಿ ಜಪ್ತಿಗೆ ರಾಜ್ಯ ಸರ್ಕಾರದಿಂದ ಗ್ರೀನ್ ಸಿಗ್ನಲ್

ಬೆಂಗಳೂರು: ಮಾಜಿ ಸಚಿವ ಜನಾರ್ದನ ರೆಡ್ಡಿ ಆಸ್ತಿ ಜಪ್ತಿ ಮಾಡಲು ರಾಜ್ಯ ಸರ್ಕಾರದ ಅನುಮತಿ ನೀಡಿದೆ.


ಅಕ್ರಮ ಗಣಿಗಾರಿಕೆ ಹಣದಿಂದ ರೆಡ್ಡಿ ಹೊಸದಾಗಿ ತೆಲಂಗಾಣ ರಾಜ್ಯಗಳಲ್ಲಿ 219 ಕಡೆ ಆಸ್ತಿಗಳನ್ನು ಖರೀದಿ ಮಾಡಿದ್ದಾರೆ. ಈ ಆಸ್ತಿಗಳನ್ನು ಜಪ್ತಿ ಮಾಡಲು ಅನುಮತಿ ನೀಡಬೇಕೆಂದು ಸರ್ಕಾರಕ್ಕೆ 2022ರ ಆಗಸ್ಟ್ 30 ರಂದು ಸಿಬಿಐ (CBI) ಪ್ರಾಸಿಕ್ಯೂಷನ್’ಗೆ ಮನವಿ ಮಾಡಿತ್ತು.


ಗುರುವಾರ ಅರ್ಜಿ ವಿಚಾರಣೆ ವೇಳೆ ಆಸ್ತಿ ಜಪ್ತಿಗೆ ರಾಜ್ಯ ಸರ್ಕಾರ ಅನುಮತಿ ನೀಡಿರುವ ಬಗ್ಗೆ ಹೈಕೋರ್ಟ್ ಗೆ ಸರ್ಕಾರಿ ವಕೀಲರು ಮಾಹಿತಿ ನೀಡಿದರು. ಸಿಬಿಐ ಸಲ್ಲಿಸಿದ್ದ ಅರ್ಜಿ ಇತ್ಯರ್ಥಗೊಳಿಸಿದ ಹೈಕೋರ್ಟ್ ಆಸ್ತಿ ಜಪ್ತಿಗೆ ಸಿಬಿಐ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿ ಮುಂದುವರೆಯುವಂತೆ ಸೂಚನೆ ನೀಡಿತು.

Join Whatsapp
Exit mobile version