ಅಂಗನವಾಡಿಗಳಿಗೆ ಬಾಡಿಗೆ ಕಟ್ಟಲು ಯೋಗ್ಯತೆ ಇಲ್ಲದ ರಾಜ್ಯ ಸರ್ಕಾರ: ಆರ್ ಅಶೋಕ್

Prasthutha|

ರಾಯಚೂರು: ಅಂಗನವಾಡಿ ಕೇಂದ್ರಗಳಿಗೆ ಬಾಡಿಗೆ ಕಟ್ಟಲು ಯೋಗ್ಯತೆ ಇಲ್ಲದ ಸರ್ಕಾರ ಇದ್ದರೆಷ್ಟು ಸತ್ತರೆಷ್ಟು ಎಂದು ವಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ ಹೊರಹಾಕಿದ್ದಾರೆ.

- Advertisement -


ರಾಯಚೂರು ಜಿಲ್ಲೆಯಲ್ಲಿ 2856 ಅಂಗನವಾಡಿ ಕೇಂದ್ರಗಳ ಪೈಕಿ ಒಟ್ಟು 808 ಬಾಡಿಗೆ ಕಟ್ಟಡಗಳ ಕೋಟ್ಯಂತರ ರೂಪಾಯಿ ಬಾಡಿಗೆಯನ್ನು ಬಿಡುಗಡೆ ಮಾಡದೆ ರಾಜ್ಯ ಸರ್ಕಾರ ಬಾಕಿ ಉಳಿಸಿದೆ.

ಈ ಬಗ್ಗೆ ಟ್ವೀಟ್ ಮಾಡಿದ ಅಶೋಕ್, “ಅಂಗನವಾಡಿ ಕೇಂದ್ರಗಳಿಗೆ ಬಾಡಿಗೆ ಕಟ್ಟಲೂ ಯೋಗ್ಯತೆ ಇಲ್ಲದ ಕಾಂಗ್ರೆಸ್ ಸರ್ಕಾರ, ಅಂಗನವಾಡಿ ಕಾರ್ಯಕರ್ತೆಯರು ಬಡ್ಡಿಗೆ ಸಾಲ ತಂದು ಕಟ್ಟಡದ ಬಾಡಿಗೆ ಕಟ್ಟುವ ಪರಿಸ್ಥಿತಿ ತಂದಿಟ್ಟಿದೆ. ಗ್ರಾಮೀಣ ಭಾಗದ ಬಡ ಕುಟುಂಬದ ಗರ್ಭಿಣಿಯರು, ಬಾಣಂತಿಯರು ಹಾಗೂ ಮಕ್ಕಳಿಗೆ ಅಂಗನವಾಡಿಯಲ್ಲಿ ಸಿಗುವ ಬಿಸಿಯೂಟ, ಪೌಷ್ಠಿಕ ಆಹಾರವೇ ಜೀವನಾಧಾರ” ಎಂದರು.
ಅಂಗನವಾಡಿ ಕೇಂದ್ರಗಳಿಗೆ ಬಾಡಿಗೆ ಕಟ್ಟಲೂ ಯೋಗ್ಯತೆ ಇಲ್ಲದ ಕಾಂಗ್ರೆಸ್ ಸರ್ಕಾರ, ಅಂಗನವಾಡಿ ಕಾರ್ಯಕರ್ತೆಯರು ಬಡ್ಡಿಗೆ ಸಾಲ ತಂದು ಕಟ್ಟಡದ ಬಾಡಿಗೆ ಕಟ್ಟುವ ಪರಿಸ್ಥಿತಿ ತಂದಿಟ್ಟಿದೆ ಎಂದರು.



Join Whatsapp