ಮದ್ಯ ಪ್ರಿಯರಿಗೆ ರಾಜ್ಯ ಸರ್ಕಾರ ಶಾಕ್: ಬಿಯರ್ ಸೇರಿದಂತೆ ಎಲ್ಲಾ ಬ್ರಾಂಡ್ ಗಳ ಬೆಲೆ ಹೆಚ್ಚಳ

Prasthutha|

ಮದ್ಯದ ಘೋಷಿತ ಸ್ಲಾಬ್ ಗಳನ್ನು ತರ್ಕಬದ್ಧಗೊಳಿಸುವ ಮೂಲಕ ನೆರೆ ರಾಜ್ಯಗಳ ಮದ್ಯದ ಬೆಲೆಗಳಿಗೆ ಅನುಗುಣವಾಗಿ IML, ಬಿಯರ್ ಸ್ಲಾಬ್ ಪರಿಷ್ಕರಣೆ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ಘೋಷಿಸಿದರು. ಮದ್ಯದ ದರ ಮತ್ತೆ ಹೆಚ್ಚಿಸಲು ನಿರ್ಧಾರ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

- Advertisement -


2023-24ನೇ ಸಾಲಿನ ಜನವರಿ ತಿಂಗಳ ಅಂತ್ಯದವರೆಗೆ, ಅಬಕಾರಿ ತೆರಿಗೆಯಿಂದ 28,181 ಕೋಟಿ ರೂ.ಗಳು ಸ್ವೀಕೃತವಾಗಿರುತ್ತದೆ. 2024-25ನೇ ಸಾಲಿಗೆ 38,525 ಕೋಟಿ ರೂ.ಗಳ ರಾಜಸ್ವ ಸಂಗ್ರಹಣೆ ಗುರಿಯನ್ನು ನಿಗದಿಪಡಿಸಲಾಗಿದೆ ಎಂದು ಅವರು ತಿಳಿಸಿದರು.



Join Whatsapp