Home ಟಾಪ್ ಸುದ್ದಿಗಳು ರಾಜ್ಯ ಸರ್ಕಾರದ ವಿರುದ್ಧ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದ ಶಿಕ್ಷಕ ಅಮಾನತು

ರಾಜ್ಯ ಸರ್ಕಾರದ ವಿರುದ್ಧ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದ ಶಿಕ್ಷಕ ಅಮಾನತು

ಚಿತ್ರದುರ್ಗ: ರಾಜ್ಯ ಸರ್ಕಾರದ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದ ಶಿಕ್ಷಕನನ್ನು ಅಮಾನತು ಮಾಡಲಾಗಿದೆ.

ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಕಾನುಬೇನಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಶಾಂತಮೂರ್ತಿ ಅಮಾನತುಗೊಳಿಸಿ ಬಿಇಒ ಜಯಪ್ಪ ಆದೇಶ ಹೊರಡಿಸಿದ್ದಾರೆ.

ರಾಜ್ಯಕ್ಕಾಗಿ ಮುಖ್ಯಮಂತ್ರಿಗಳು ಮಾಡಿದ ಸಾಲ. ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ 2,42,000 ಕೋಟಿ ಸಾಲ ಆಗಿದೆ. ಬಿಟ್ಟಿ ಭಾಗ್ಯ ಕೊಡದೆ ಇನ್ನೇನು ಎಂದು ಶಿಕ್ಷಕ ಶಾಂತಮೂರ್ತಿ ರಾಜ್ಯ ಸರ್ಕಾರದ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಟೀಕೆ ಮಾಡಿ ಪೋಸ್ಟ್ ಹಾಕಿದ್ದರು. ಈ ಹಿನ್ನೆಲೆಯಲ್ಲಿ ಶಿಕ್ಷಕನನ್ನು ಅಮಾನತುಗೊಳಿಸಲಾಗಿದೆ.

Join Whatsapp
Exit mobile version