ರಾಜ್ಯ ನಾಯಕರಿಗೆ ಏಕಾಂಗಿಯಾಗಿ ಚುನಾವಣೆ ಎದುರಿಸುವ ಶಕ್ತಿಯಿಲ್ಲ: ಬಿಜೆಪಿ ಶಾಸಕ ಯತ್ನಾಳ್

Prasthutha|

ರಾಯಚೂರು: 2023ರ ವಿಧಾನಸಭಾ ಚುನಾವಣೆಯನ್ನು ರಾಜ್ಯದ ಯಾವುದೇ ನಾಯಕರಿಗೆ ಏಕಾಂಗಿಯಾಗಿ ಎದುರಿಸುವ ಶಕ್ತಿಯಿಲ್ಲ. ಪ್ರಧಾನಿ ನರೇಂದ್ರ ಮೋದಿ ಹೆಸರಿನ ಮೇಲೆ ಚುನಾವಣೆಯನ್ನು ಎದುರಿಸುತ್ತೇವೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.

- Advertisement -

ಜಿಲ್ಲೆಯ ದೇವದುರ್ಗ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಾತನಾಡಿದ ಅವರು, ಮಂತ್ರಿ ಮಂಡಲ ಪುನಾರಚನೆ ಅಗತ್ಯವಿಲ್ಲ. ವಿಧಾನಸಭಾ ಚುನಾವಣೆಗೆ ಕೇವಲ ಆರು ತಿಂಗಳು ಮಾತ್ರವೇ ಬಾಕಿಯಿದೆ. ಹೀಗಿರುವಾಗ ಸಂಪುಟ ವಿಸ್ತರಣೆ ಮಾಡಿದರೆ ಯಾವುದೇ ಉಪಯೋಗವಿಲ್ಲ ಎಂದು ತಿಳಿಸಿದರು.

Join Whatsapp