ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆ ಸಂಘಪರಿವಾರದ ಕೈಗೊಂಬೆಯಾಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಬಿಜೆಪಿ ಪಕ್ಷದ ಪುಂಡರ ಗೂಂಡಾಗಿರಿಗೆ ಅವಕಾಶ ನೀಡಿ, ಕೈಕಟ್ಟಿಕೊಂಡು ತಮಾಷೆ ನೋಡುವ ಪೊಲೀಸರ ಕರ್ತವ್ಯ ಲೋಪ ಖಂಡಿಸಿ ಈ ತಿಂಗಳ 26 ರಂದು ಕೊಡಗಿನ ಎಸ್.ಪಿ ಕಚೇರಿಗೆ ಮುತ್ತಿಗೆ ಹಾಕುತ್ತೇವೆ ಎಂದು ತಿಳಿಸಿದರು.
ಬಿಜೆಪಿಯ ಗೂಂಡಾಗಿರಿಗೆ ಹೋರಾಟದ ಮೂಲಕವೇ ತಕ್ಕ ಉತ್ತರ ಕೊಡುತ್ತೇವೆ ಎಂದು ಹೇಳಿದರು.